ಫೈಜಾಬಾದ್: ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿದ್ದ ದಲಿತ ಸಮುದಾಯಕ್ಕೆ ಸೇರಿದ 22 ವರ್ಷ ವಯಸ್ಸಿನ ಯುವತಿಯ ಕಣ್ಣುಗುಡ್ಡೆ ಕಿತ್ತು, ಬಟ್ಟೆ ಹರಿದು ಭೀಕರವಾಗಿ ಅತ್ಯಾಚಾರ ನಡೆಸಿರುವ ಘಟನೆ ಅಯೋಧ್ಯೆಯ ಬಳಿ ನಡೆದಿದೆ.
ಗುರುವಾರ ರಾತ್ರಿಯಾದರೂ ಯುವತಿ ಮನೆಗೆ ಬಾರದ ಹಿನ್ನೆಲೆ ಆತಂಕಗೊಂಡ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆದರೆ ದೂರು ಸ್ವೀಕರಿಸಬೇಕಿದ್ದ ಪೊಲೀಸರು, ನಿಮ್ಮ ಮಗಳನ್ನು ನೀವೇ ಹುಡುಕಿ ಎಂದು ಗದರಿಸಿ ಪೋಷಕರನ್ನು ಕಳುಹಿಸಿದ್ದರು.
ಕೊನೆಗೆ ಅಯೋಧ್ಯೆಯ ಕಾಲುವೆಯೊಂದರಲ್ಲಿ ಯುವತಿಯ ಮೃತದೇಹ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತದೇಹದ ಮೇಲೆ ಬಟ್ಟೆ ಇರಲಿಲ್ಲ. ಕಣ್ಣುಗುಡ್ಡೆ ಕಿತ್ತುಹಾಕಲಾಗಿದೆ. ದೇಹದ ಹಲವೆಡೆ ಗಂಭೀರ ಗಾಯಗಳಾಗಿವೆ. ಕೈಕಾಲುಗಳನ್ನು ಹಗ್ಗಗಳಿಂದ ಕಟ್ಟಲಾಗಿತ್ತು ಆಕೆಯ ಮೇಲೆ ಅತ್ಯಾಚಾರ ನಡೆಸಿ ನಂತರ ಕೊಲ್ಲಲಾಗಿದೆ ಎಂದು ಪೋಷಕರು ಶಂಕಿಸಿದ್ದಾರೆ.
ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕುಟುಂಬವು ಶುಕ್ರವಾರ ದೂರು ದಾಖಲಿಸಿದ ನಂತರ ಪೊಲೀಸರು ನಾಪತ್ತೆ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿ ಅಶುತೋಷ್ ತಿವಾರಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4