ಕೋಲ್ಕತ್ತಾದಲ್ಲಿ ಯುವತಿಯೊಬ್ಬಳ ಮೇಲೆ ದೌರ್ಜನ್ಯ ನಡೆದಿದೆ. ಟಾಲಿವುಡ್ ಚಿತ್ರರಂಗದಲ್ಲಿ ಅವಕಾಶ ಕೊಡಿಸುವುದಾಗಿ ಯುವತಿಯನ್ನು ಆಕೆಯ ಸ್ನೇಹಿತರು ಕಾರಿನಲ್ಲಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಯುವತಿ ಕೆಲವು ವರ್ಷಗಳ ಹಿಂದೆ ಕೋಲ್ಕತ್ತಾದ ಬೆಹಾಲಾ ಮೂಲದ ಯುವಕನೊಬ್ಬನನ್ನು ಭೇಟಿಯಾಗಿದ್ದಳು. ಆತ ತಾನು ಬಂಗಾಳಿ ಚಲನಚಿತ್ರೋದ್ಯಮದ ಪ್ರಮುಖ ವ್ಯಕ್ತಿ ಎಂದು ಪರಿಚಯಿಸಿಕೊಂಡಿದ್ದ.
ಘಟನೆ ಕುರಿತು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.


