ಆಡುಗೋಡಿ ಠಾಣೆ ವ್ಯಾಪ್ತಿಯ ಮಾಲ್ ವೊಂದರಲ್ಲಿ ರಂಪಾಟ ಮಾಡಿ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರೊಬ್ಬರ ಕೈಗೆ ಕಚ್ಚಿದ್ದ ಆರೋಪದಡಿ ಯುವತಿಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆಯ 28 ವರ್ಷದ ಯುವತಿ, ನಗರದ ಪೇಯಿಂಗ್ ಗೆಸ್ಟ್ ಕಟ್ಟಡವೊಂದರಲ್ಲಿ ವಾಸವಿದ್ದರು. ಹಲ್ಲೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಯುವತಿಯನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.


