ಸರಗೂರು: ಆಲನಹಳ್ಳಿ ಹಾಡಿಯ ಕುರುಬ ಜನಾಂಗದವರಿಗೆ ಸರಿಯಾದ ಮಸಣ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಮೃತದೇಹದ ಅಂತ್ಯಸಂಸ್ಕಾರಕ್ಕೂ ಪರದಾಡಿದ ಸ ಘಟನೆ ತಾಲ್ಲೂಕಿನ ಬಿ ಮಟಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಸುಮಾರು 30 ವರ್ಷಗಳಿಂದಲೂ ಮಸಣ ಮಾಲ ಇಲ್ಲದೇ ಇಲ್ಲಿನ ಜನರು ಶವ ಸಂಸ್ಕಾರಕ್ಕೂ ಪರದಾಡುವಂತಾಗಿದೆ. ಇದಲ್ಲದೇ ಇಲ್ಲಿಗೆ ಕನಿಷ್ಠ ರಸ್ತೆ ವ್ಯವಸ್ಥೆ ಇಲ್ಲ. ಇಲ್ಲಿನ ಜನರಿಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಗಳು ಕೂಡ ಇಲ್ಲದಂತಹ ಸ್ಥಿತಿ ಇಲ್ಲಿದೆ ಎಂದು ಹೇಳಲಾಗಿದೆ.
ಈ ಸಂಬಂಧ ಮಾಹಿತಿ ನೀಡಿದ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಬೆಟ್ಟಸ್ವಾಮಿ ಕುರ್ಣೇಗಾಲ, 30-40 ವರ್ಷಗಳಿಂದ ಇಲ್ಲಿನ ಜನರಿಗೆ ಶವ ಸಂಸ್ಕಾರ ಮಾಡಲು ಜಾಗವಿಲ್ಲ. ತಿರುಗಾಡಲು ರಸ್ತೆಯ ಇಲ್ಲ. ಇವರ ತಾತ ಕಾಲದಿಂದಲ್ಲೂ ಕಾಡಿನಲ್ಲಿ ಶವ ಸಂಸ್ಕಾರ ಮಾಡಿದ್ದರು. ಆದರೆ ಈವಾಗ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಿನ ಜಾಗಕ್ಕೆ ತಂತಿಯನ್ನು ನಿರ್ಮಾಣ ಮಾಡಿಕೊಂಡು ಹಾಡಿಯ ಜನರಿಗೆ ತುಂಬಾ ತೊಂದರೆಯನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಡು ಕುರುಬ ಜನರಿಗೆ ಮಸಣಮಾಲ ಜಾಗವನ್ನು ತಕ್ಷಣವೇ ನೀಡಬೇಕು. ಇಲ್ಲವಾದರೆ, ತಹಶೀಲ್ದಾರ್ ಕಚೇರಿ ಮುಂದೆ ಮೃತದೇಹ ಇಟ್ಟು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಕಂದಾಯ ಇಲಾಖೆಯ ಅಧಿಕಾರಿಗಳು ಹಾಡಿಯ ಜನರಿಗೆ ಮಸಣಮಾಲವನ್ನು ಜಾಗವನ್ನು ಗುರುತು ಪಡಿಸಿ ಜನರಿಗೆ ಅನುಕೂಲ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy