nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    • ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ
    • ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ
    • ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್
    • ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
    • ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಮ್ ಆದ್ಮಿ ಪಾರ್ಟಿ ಪದಾಧಿಕಾರಿ ಬಿಜೆಪಿ ಸೇರಿಲ್ಲ: ಎಎಪಿ ನಗರಾಧ್ಯಕ್ಷ ಮೊಹಮ್ಮದ್ ಗೌಸ್ ಸ್ಪಷ್ಟನೆ
    ತುಮಕೂರು April 20, 2024

    ಆಮ್ ಆದ್ಮಿ ಪಾರ್ಟಿ ಪದಾಧಿಕಾರಿ ಬಿಜೆಪಿ ಸೇರಿಲ್ಲ: ಎಎಪಿ ನಗರಾಧ್ಯಕ್ಷ ಮೊಹಮ್ಮದ್ ಗೌಸ್ ಸ್ಪಷ್ಟನೆ

    By adminApril 20, 2024Updated:April 21, 2024No Comments2 Mins Read
    aap

    Provided by
    Provided by

    ತುಮಕೂರು: ಜಿಲ್ಲೆಯ ಆಮ್ ಆದ್ಮಿ ಪಾರ್ಟಿಯ ಯಾವೊಬ್ಬ ಪದಾಧಿಕಾರಿಯೂ ಬಿಜೆಪಿ ಸೇರ್ಪಡೆಯಾಗಿಲ್ಲ ಎಂದು ಎಎಪಿ ನಗರಾಧ್ಯಕ್ಷ ಮೊಹಮ್ಮದ್ ಗೌಸ್ ಸ್ಪಷ್ಟಪಡಿಸಿದ್ದಾರೆ.

    ರಾಷ್ಟ್ರ ಮಟ್ಟದಲ್ಲಿ ಆಗಿರುವ ಇಂಡಿಯಾ ಮಹಾ ಘಟ್ ಬಂಧನ್ ಮೈತ್ರಿ ಕೂಟದಲ್ಲಿ ಆಮ್ ಆದ್ಮಿ ಪಾರ್ಟಿ ಕೂಡ ಪ್ರಮುಖ ಪಕ್ಷವಾಗಿದ್ದು, ಈ ಮೈತ್ರಿ ಧರ್ಮದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಆಮ್ ಆದ್ಮಿ ಪಾರ್ಟಿಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಆದರೆ ಸೋಲಿನ ಭೀತಿಯಲ್ಲಿರುವ ಜಿಲ್ಲಾ ಬಿಜೆಪಿ ಕಳೆದ ಹತ್ತು ವರ್ಷಗಳ ಹಿಂದೆ ನಮ್ಮ ಪಕ್ಷದಲ್ಲಿದ್ದು, ನಂತರ ನಾಪತ್ತೆಯಾಗಿದ್ದ ಮುನಿಯಪ್ಪ ಎಂಬುವರನ್ನು ಹುಡುಕಿ ಜಿಲ್ಲಾ ಎಎಪಿ ಖಜಾಂಚಿ ಬಿಜೆಪಿ ಸೇರ್ಪಡೆ ಆಗಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದೆ. ಇದು ಸತ್ಯಕ್ಕೆ ದೂರ. ಅಸಲಿ ವಿಷಯವೆಂದರೆ ನಮ್ಮ ಜಿಲ್ಲಾ ಎಎಪಿಯಲ್ಲಿ ಈವರೆಗೆ ಖಜಾಂಚಿ ಹುದ್ದೆಯೇ ಇಲ್ಲ ಎಂದು ಎ ಎ ಪಿ ಮುಖಂಡರು ತಿರುಗೇಟು ನೀಡಿದ್ದಾರೆ.

    ನಮ್ಮ ಆಮ್ ಆದ್ಮಿ ಪಾರ್ಟಿಯ ಅತ್ಯುನ್ನತ ನಾಯಕರಾದ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿಟ್ಟು ಲೋಕಸಭಾ ಚುನಾವಣೆ ನಡೆಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ನಡೆಯನ್ನೇ ಅನುಸರಿಸಿ ಜಿಲ್ಲಾ ಬಿಜೆಪಿ ನಮ್ಮ ಪಕ್ಷದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಕಿಡಿಗೇಡಿತನದ ಪರಮಾವಧಿ ಎಂದು ಖಂಡಿಸಿದ್ದಾರೆ.

    ಜಿಲ್ಲಾ ವ್ಯಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳಾದ ತುಮಕೂರು ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ, ಚಿತ್ರದುರ್ಗದ ಬಿ.ಎನ್.ಚಂದ್ರಪ್ಪ ಹಾಗೂ ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಿ.ಕೆ.ಸುರೇಶ್ ಗೆಲುವಿಗೆ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಯಾ ಕ್ಷೇತ್ರವಾರು  ‘ಮಾಡು ಇಲ್ಲವೇ ಮಡಿ’ ಎಂಬಂತೆ ದುಡಿಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ನಾವು ಚುನಾವಣೆ ಪ್ರಚಾರಕ್ಕೆ ಹೋದಡೆಯೆಲ್ಲಾ ನಮ್ಮ ನಾಯಕರಾದ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಬಾರಿ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಅಧ್ಯಕ್ಷ ಎಚ್.ಎ.ಜಯರಾಮಯ್ಯ ಹಾಗೂ ಎಎಪಿ ನಗರಾಧ್ಯಕ್ಷ ಮೊಹಮ್ಮದ್ ಗೌಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ತುಮಕೂರು: ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ನಗರದಲ್ಲಿರುವ ಬಾಲ ಭವನವನ್ನು ಅತ್ಯಾಧುನಿಕವಾಗಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್,…

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.