ಬೀದರ್: ಬೀದರ್ ಜಿಲ್ಲೆಯ ಕಾಂಗ್ರೆಸ್ ಸಮಿತಿ (DCC) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಅಬ್ದುಲ್ ಮನ್ನಾನ್ ಸೇಠ್ ಅವರನ್ನು ರಾಷ್ಟ್ರೀಯ ಅಹಿಂದ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಯುವನಾಯಕರಾದ ಕುರುಬರ ರಾಮಣ್ಣ ಹಾಗೂ ಅವರ ಸಂಗಡಿಗರು ಭೇಟಿ ಮಾಡಿ ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರ ಭಾವಚಿತ್ರ ಒಳಗೊಂಡ ಸ್ಮರಣಿಕೆ ನೀಡಿ, ನೂತನ ಅಧ್ಯಕ್ಷರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ಅಬ್ದುಲ್ ಮನ್ನಾನ್ ಸೇಠ್ ಅವರ ಸುದೀರ್ಘ ರಾಜಕೀಯ ಅನುಭವ, ಸಂಘಟನಾ ಚಾತುರ್ಯ ಹಾಗೂ ಪಕ್ಷದ ತತ್ವ–ಸಿದ್ಧಾಂತಗಳ ಮೇಲಿನ ಅಚಲ ನಿಷ್ಠೆಯು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಸಹಕಾರಿಯಾಗಲಿದೆ. ಅಲ್ಲದೆ, ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಇದು ಹೊಸ ಚೈತನ್ಯ ತುಂಬಲಿದೆ ಎಂದು ನಾಯಕರು ಆಶಿಸಿದರು.
ಈ ವೇಳೆ ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದ ಅರಳಿ, ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷರಾದ ದಯಾನಂದ್ ಜಿ. ಬಂದಿ, ರಾಷ್ಟ್ರೀಯ ಅಹಿಂದ ಸಂಘಟನೆಯ ಜಿಲ್ಲಾಧ್ಯಕ್ಷ ಘಾಳೇಪ್ಪಾ ಬೇಮಳಖೇಡ, ಸುನಿಲ್ ಚಿಲ್ಲರ್ಗಿ, ರೇಣುಕಾ ಬಂದಿಗೆ, ಅಂಬಿಕಾ ಸೋನಿ ಹಾಗೂ ಸಿದ್ದಪ್ಪ ವಾಲೆಕರ್ (ಬಿಜಾಪುರ) ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಮಂಜು ಶ್ರವಣೂರು, ಹೊಳೆನರಸೀಪುರ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
