ಜಪಾನ್ ನ ಮಾಜಿ ಪ್ರಧಾನಿ ಶಿಂಜೋ ಅಬೇ ಅವರ ಮೇಲೆ ಆಗುಂತಕನೊಬ್ಬ ಗುಂಡು ಹಾರಿಸಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಮಾಜಿ ಪ್ರಧಾನಿ ಮೃತಪಟ್ಟಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.
ಸಾರ್ವಜನಿಕ ಕಾರ್ಯಕ್ರಮಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಆಗುಂತಕನೊಬ್ಬ ಶಿಂಜೆ ಅಬೆ ಅವರ ಮೇಲೆ ಗುಂಡು ಹಾರಿಸಿದ ಪರಿಣಾಮ ಕುತ್ತಿಗೆ ಮತ್ತು ಎದೆ ಭಾಗದಲ್ಲಿ ತೀವ್ರ ರಕ್ತಸ್ತ್ರಾವವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ೬೭ ವರ್ಷದ ಅಬೆ ಮೃತಪಟ್ಟಿದ್ದಾರೆ ಎಂದು ಮತ್ತೊಂದು ಮೂಲಗಳು ತಿಳಿಸಿವೆ.
ಘಟನೆ ಸಂಬಂಧ ೪೧ ವರ್ಷದ ಯಮಗಮಿ ಹುವಾ ಎನ್ನುವ ಆಗುಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಳಿ ಇದ್ದ ಬಂದೂಕು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿಂಜೊ ಅಬೆ ಭಾಷಣದ ಸಮಯದಲ್ಲಿ ಗುಂಡು ಹಾರಿಸಿದ್ದು ಗುಂಡೇಟಿಗೆ ತಕ್ಷಣ ಕುಸಿದುಬಿದ್ದರು.ಅವರ ಕುತ್ತಿಗೆಯಿಂದ ರಕ್ತಸ್ರಾವವಾಗಿತ್ತು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಈ ಮೂಲಗಳು ತಿಳಿಸಿವೆ.
ಜಪಾನ್ ನಾರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಜಿ ನಾಯಕ ಭಾಷಣ ಮಾಡುತ್ತಿದ್ದಾಗ ಗುಂಡೇಟಿನ ಸದ್ದು ಕೇಳಿಬಂದಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಗುಂಡೇಟಿನಿಂದ ಕುಸಿದುಬಿದ್ದು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ ಮೂಲಗಳು ಸುದ್ದಿ ಸಂಸ್ಥೆಗೆ ತಿಳಿಸಿವೆ.
ನಾರಾದ ಪಶ್ಚಿಮ ಪ್ರದೇಶದಲ್ಲಿ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಜಪಾನ್ ಸರ್ಕಾರ ದೃಢಪಡಿಸಿದೆ.
“ಮಾಜಿ ಪ್ರಧಾನಿ ಅಬೆ ಅವರನ್ನು ನಾರಾದಲ್ಲಿ ಬೆಳಿಗ್ಗೆ ೧೧:೩೦ ರ ಸುಮಾರಿಗೆ ಗುಂಡು ಹಾರಿಸಲಾಗಿದೆ. ದಾಳಿಕೋರನ್ನು ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಮಾಜಿ ಪ್ರಧಾನಿ ಅಬೆ ಅವರ ಸ್ಥಿತಿ ಪ್ರಸ್ತುತ ತಿಳಿದಿಲ್ಲ” ಎಂದು ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಹಿರೋಕಾಜು ಮಾಟ್ಸುನೊ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಆರೋಗ್ಯದ ಬಗ್ಗೆ ದ್ವಂದ ಹೇಳಿಕೆಗಳು ಬರುತ್ತಿದ್ದು ಇನ್ನಷ್ಟೇ ಖಚಿತವಾಗಬೇಕಾಗಿದೆ.
ಜಪಾನ್ನ ಕಾಲಮಾನ ಬೆಳಿಗ್ಗೆ ೧೧.೩೦ರ ವೇಳೆಗೆ ಗುಂಡಿನ ದಾಳಿ ನಡೆಸಿದ್ದು, ಮಾಜಿ ಪ್ರಧಾನಿ ಪರಿಸ್ಥಿತಿ ಚಿಂತಾಜನಕವಾಗಿದೆ.
ಜಪಾನ್ನ ನಾರಾ ನಗರದಲ್ಲಿ ಚುನಾವಣಾ ಪ್ರಚಾರ ಭಾಷಣ ಮಡುವ ವೇಳೆ ಹಿಂದಿನಿಂದ ಬಂದ ದುಷ್ಕರ್ಮಿ ಗುಂಡು ಹಾರಿಸಿದ್ದಾನೆ ಎಂದು ಜಪಾನ್ ದೂರದರ್ಶನ ವರದಿ ಮಾಡಿದೆ.
ಎರಡು ಅವಧಿಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಅಬೆ ಅನಾರೋಗ್ಯ ಕಾರಣದಿಂದ ಪ್ರಧಾನಿ ಸ್ಥಾನದಿಂದ ಕೆಳಗಿಳಿದಿದ್ದರು.
ಭಾರತದೊಂದಿಗೆ ಅಬೆ ಅತ್ಯುತ್ತಮ ರಾಜತಾಂತ್ರಿಕ ಸಂಬಂಧ ಹೊಂದಿದ್ದರು. ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಾರಾಣಸಿಯಲ್ಲಿ ಅಬೆ ಗಂಗಾರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz