ಗುಬ್ಬಿ: ಗುಂಡು ತೋಪು ಅಭಿವೃದ್ಧಿ ನೆಪದಲ್ಲಿ ಪೆದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್, ಬೆಳೆದು ನಿಂತ 100 ಕ್ಕೂ ಹೆಚ್ಚು ಮರಗಳನ್ನು ಕತ್ತಿರಿಸಿ ಹಾಕಿರುವ ಘಟನೆ ಕಡಬ ಹೋಬಳಿಯ ಕುಣ್ಣಾಘಟ್ಟ ಗ್ರಾಮದಲ್ಲಿ ಶನಿವಾರ ಜರುಗಿದೆ.
ಪೆದ್ದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಂ.ನಂ.104 ವಿಸ್ತಿರ್ಣ 4.07 ಗುಂಟೆ ಜಮೀನಿದ್ದು, ಈ ಜಮೀನಿನಲ್ಲಿ ಸುಮಾರು ನೂರು ಸಂಖ್ಯೆಯ ವಿವಿಧ ಜಾತಿಯ ಮರಗಳು ಬೆಳೆದಿದ್ದು, ಗ್ರಾಮಸ್ಥರ ಅನುಕೂಲಕ್ಕಾಗಿ ಮೀಸಲಾಗಿರುವ ಈ ಜಾಗದಲ್ಲಿ ನೂರಾರು ಸಂಖ್ಯೆಯಲ್ಲಿ ಮರಗಳು ಬೆಳೆದಿರುವುದನ್ನು ಲೆಕ್ಕಿಸದೆ ಅಭಿವೃದ್ಧಿ ನೆಪವೊಡ್ಡಿ ಮರಗಳ ಮಾರಣಹೋಮ ನಡೆಸಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪ ವ್ಯಕ್ತಪಡಿಸಿದ್ದಾರೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ ನ ದರ್ಪ:
ಪೆದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಸಂಭಂಧ ಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರದೆ ಉದ್ದೇಶ ಪೂರ್ವಕವಾಗಿ ಗ್ರಾಮ ಪಂಚಾಯಿತಿ ಹಣ ಹೊಡೆಯಲು ಈ ಕೆಲಸ ಕ್ಕೆ ಮುಂದಾಗಿದ್ದಾರೆ ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು ಆರೋಪಿಸಿದ್ದಾರೆ.
ವರದಿ: ಮಂಜುನಾಥ್ ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB