ಹಾಸನ: ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಮಂದಿ ಪ್ರತಿ ವರ್ಷ ಸಾವಿಗೀಡಾಗುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಸಿ. ಎನ್. ಮಂಜುನಾಥ್ ಹೇಳಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಿರ್ಮಾಣವಾಗಿರುವ ‘ಧರ್ಮಸ್ಥಳದಲ್ಲಿ ನಮ್ಮೂರ ಗಣಪ ಮಂಟಪ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೃದಯಾಘಾತ ಪ್ರಕರಣಗಳು ಕೇವಲ ಹಾಸನಕ್ಕೆ ಮಾತ್ರ ಸೀಮಿತವಾಗದೆ ಭಾರತದಲ್ಲಿ ಸುಮಾರು 30 ಲಕ್ಷ ಮಂದಿ ಪ್ರತಿ ವರ್ಷ ಸಾವಿಗೀಡಾಗುತ್ತಿದ್ದಾರೆ ಎಂದು ತಿಳಿಸಿದರು.
ಮಾನಸಿಕ ಒತ್ತಡ ಅವರ ಜೀವನದ ಅಭ್ಯಾಸ ಕ್ರಮಗಳು ಮತ್ತು ಧೂಮಪಾನ, ಮದ್ಯಪಾನದಂತಹ ಕೆಟ್ಟ ಚಟಗಳಿಂದ ಸ್ವಯಂ ಪ್ರೇರಿತವಾಗಿ ಅವರು ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದರು.
ಇವತ್ತು ದೇಶದಲ್ಲಿ ಯಾರೂ ಮದ್ಯಪಾನ ಮಾಡದವರು ಎಂಬುದನ್ನು ಹುಡುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಧೂಮಪಾನ ಮತ್ತು ಮದ್ಯಪಾನ ಹೃದಯಾಘಾತಕ್ಕೆ ಕಾರಣವಾಗಿದೆ. ಹಾಗೆ ಒತ್ತಡಗಳ ನಡುವೆ ಐಷಾರಾಮಿ ಜೀವನ ನಡೆಸುತ್ತಿರುವುದು, ಮತ್ತು ಮಾನಸಿಕ ಖಿನ್ನತೆಯಿಂದ ಮಾನವನ ದೇಹ ಸಡಿಲಿಕೆಯಾಗಿ ಉಸಿರಾಟಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ತಿಳಿಸಿದರು.
ಭಾರತ ದೇಶದಲ್ಲಿ ಸುಮಾರು 60ರಷ್ಟು ಸಾವುಗಳು ಜೀವನ ಶೈಲಿಯ ಆಧಾರಿತ ಕಾಯಿಲೆಗಳಿಂದ ಸಂಭವಿಸುತ್ತಿವೆ. ಹೀಗಾಗಿ ಮದ್ಯಪಾನ ಮತ್ತು ಧೂಮಪಾನವನ್ನು ನಿಲ್ಲಿಸಿ ಪ್ರತಿನಿತ್ಯ ಯೋಗಾಸನ ಮತ್ತು ವ್ಯಾಯಾಮವನ್ನು ಪ್ರಾರಂಭಿಸಿ ಎಂದು ಕಿವಿಮಾತು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC