ಬೆಂಗಳೂರು : ಸಾಮಾಜಿಕ ಜಾಲತಾಣ ಇನ್ಸಾಗ್ರಾಮ್ ನಲ್ಲಿ ಬೆಂಗಳೂರು ಹಾಗೂ ಕನ್ನಡಿಗರ ಬಗ್ಗೆ ನಿಂದನೆ ಮಾಡಿದ್ದ ಆರೋಪಿಯನ್ನ ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ನಿಲಯ್ ಮಂಡಲ್ ಬಂಧಿತ ಆರೋಪಿಯಾಗಿದ್ದಾನೆ. ಈತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಬೆಂಗಳೂರಿನಲ್ಲಿ ಕಾಫಿ ತಿಂಡಿಗೆ ಹೆಚ್ಚಿನ ದರ ಚಾರ್ಜ್ ಮಾಡ್ತಾರೆ. ಕನ್ನಡ ಮಾತಾಡಲು ಒತ್ತಾಯ ಮಾಡುತ್ತಾರೆ ಎಂದು ಆರೋಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎನ್ನಲಾಗಿದೆ.


