ತುಮಕೂರು: ಇತ್ತೀಚೆಗಷ್ಟೆ ಭ್ರಷ್ಟ ಅಧಿಕಾರಿಯೊಬ್ಬ ಎಸಿಬಿ ಬಲೆಗೆ ಬಿದ್ದಿರುವ ಬೆನ್ನಲ್ಲೇ ಇದೀಗ ಮತ್ತೊರ್ವ ಭ್ರಷ್ಟ ಅಧಿಕಾರಿ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿಯೇ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.
ತುಮಕೂರು ಬೆಳ್ಳಾವಿ ಹೋಬಳಿ ಚಿನ್ನೇನಹಳ್ಳಿ ಗ್ರಾಮ ಲೆಕ್ಕಾಧಿಕಾರಿ (VA) ನಟರಾಜ್ ಎಸಿಬಿ ಬಲೆಗೆ ಬಿದ್ದಿದ್ದು, ತುಮಕೂರು ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಮಲ್ಲಿಕಾರ್ಜುನ್ ಚುಕ್ಕಿಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಪಹಣಿ ತಿದ್ದುಪಡಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಲೆಕ್ಕಾಧಿಕಾರಿ ನಟರಾಜ್ 20 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಮುಂಗಡವಾಗಿ 5,000 ಪಡೆದು, ಉಳಿದ 15 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ.
ಕಾರ್ಯಾಚರಣೆ ವೇಳೆ ಡಿವೈಎಸ್ಪಿ ಮಲ್ಲಿಕಾರ್ಜುನ್ ಚುಕ್ಕಿ ಇನ್ಸ್ಪೆಕ್ಟರ್ ವಿಜಯಲಕ್ಷ್ಮಿ ನರಸಿಂಹರಾಜು ಚಂದ್ರು ಶಿವಣ್ಣ ಇನ್ನಿತರರಿದ್ದರು
ವರದಿ: ಜೆಟ್ಟಿ ಅಗ್ರಹಾರ, ನಾಗರಾಜು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5