nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸಿಬಿ ರದ್ದು, ಎಜೆ ವರದಿ ನಂತರ ಕ್ರಮ
    ರಾಜ್ಯ ಸುದ್ದಿ August 13, 2022

    ಎಸಿಬಿ ರದ್ದು, ಎಜೆ ವರದಿ ನಂತರ ಕ್ರಮ

    By adminAugust 13, 2022No Comments2 Mins Read
    cm bomayi

    ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯನ್ನು ರದ್ದುಪಡಿಸಿ ಲೋಕಾಯುಕ್ತಕ್ಕೆ ಶಕ್ತಿ ತುಂಬುವ ವಿಚಾರವಾಗಿ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ಕಾನೂನು ಇಲಾಖೆ, ಅಡ್ವೊಕೇಟ್ ಜನರಲ್ ಅವರು ಅಧ್ಯಯನ ಮಾಡಿ ನೀಡುವ ವರದಿ ಆಧರಿಸಿ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದರು.

    ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ, ರಾಜ್ಯ ಭಾಷಾ ಆಯೋಗ ಹಾಗೂ ಭಾಷಾಂತರ
    ನಿರ್ದೇಶನಾಲಯದ ವತಿಯಿಂದ ಭಾರತ ದಂಡ ಸಂಹಿತೆ (ಐಪಿಸಿ), ದಂಡ ಪ್ರಕ್ರಿಯಾ ಸಂಹಿತೆ (ಸಿಸಿಪಿ) ಮತ್ತು ಭಾರತ ಸಾಕ್ಷ್ಯ ಅಧಿನಿಯಮ (ಐಇಎ), ದ್ವಿಭಾಷಾ ಕನ್ನಡ ಆವೃತ್ತಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಡುಗಡೆ ಮಾಡಿ ಮಾತನಾಡಿದರು.


    Provided by
    Provided by

    ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಚರ್ಚೆಯಾಗಿದೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗೆ ಬದ್ಧವಾಗಿದ್ದೇವೆ. ತೀರ್ಪನ್ನು ಕಾನೂನು ಇಲಾಖೆ, ಅಡ್ವೊಕೇಟ್ ಜನರಲ್ ಅವರು ಅಧ್ಯಯನ ಮಾಡಿ ನೀಡುವ ಸಲಹೆ-ಸೂಚನೆಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ಎಂದರು.

    ಕಾನೂನು ಇಲಾಖೆ ಮೂಲಕ ಎಲ್ಲ ಕಾನೂನನ್ನು ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳವಾಗಿ ಕನ್ನಡ ಭಾಷೆಗೆ ತರ್ಜುಮೆ ಮಾಡಿಸಲಾಗುವುದು. ಸರ್ಕಾರದ ತಾಲ್ಲೂಕು ಮಟ್ಟದ ಗ್ರಂಥಾಲಯಗಳು, ಪೊಲೀಸ್ ಠಾಣೆಗಳಲ್ಲಿ ಇಂದು ಬಿಡುಗಡೆಯಾದ ಕೃತಿಗಳು ದೊರೆಯುವಂತಾಗಬೇಕು. ವೆಬ್‍ಸೈಟ್‍ನಲ್ಲೂ ಪ್ರಕಟಿಸಬೇಕು ಹಾಗೂ ರಿಯಾಯಿತಿ ದರದಲ್ಲಿ ಕೃತಿಗಳನ್ನು ಮಾರಾಟ ಮಾಡುವಂತೆ ಸೂಚಿಸಿದರು.

    ಕಾನೂನು, ಸಿಆರ್‍ಪಿಸಿ ಮತ್ತು ಐಪಿಸಿಯನ್ನು ಕನ್ನಡದಲ್ಲಿ ತರ್ಜುಮೆ ಮಾಡಿಸುವ ಮೂಲಕ ಮಹತ್ವದ ಕಾರ್ಯ ಮಾಡಲಾಗಿದೆ. ಗ್ರಾಮೀಣ ಭಾಗದ ಜನರು ಕಾನೂನನ್ನು ಅರ್ಥಮಾಡಿಕೊಳ್ಳಲು ಇದು ಸಹಕಾರಿಯಾಗಲಿದೆ. ಅವಶ್ಯವಿದ್ದಾಗ ಬಳಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

    ಕಾನೂನು ಇಲಾಖೆಯು ಕಾವೇರಿ, ಕೃಷ್ಣ ನ್ಯಾಯಾೀಧಿಕರಣಗಳ ಆದೇಶಗಳನ್ನೂ ಕನ್ನಡದಲ್ಲಿ ತರ್ಜುಮೆ ಮಾಡಿಸಿದೆ ಎಂದರು.ಕಾನೂನಿನ ಜ್ಞಾನ ಮತ್ತು ಅರಿವು ಬಹಳ ಮುಖ್ಯ. ಐಪಿಸಿ ಮತ್ತು ಸಿಆರ್‍ಪಿಸಿ ಸೇರಿದಂತೆ ರಾಜ್ಯ ಹಾಗೂ ಕೇಂದ್ರದ ಕಾನೂನುಗಳ ಬಹುತೇಕ ಇಂಗ್ಲಿಷ್‍ನಲ್ಲಿವೆ. ಕಳೆದ 15 ವರ್ಷಗಳಿಂದ ಕನ್ನಡಕ್ಕೆ ತರ್ಜುಮೆ ಮಾಡಿಸಲಾಗುತ್ತಿದೆ ಎಂದು ವಿವರಿಸಿದರು.

    ಸಚಿವರಾದ ಜೆ.ಸಿ.ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಸುನಿಲ್‍ಕುಮಾರ್, ನಾರಾಯಣಗೌಡ, ಭಾಷಾಂತರ ಇಲಾಖೆ ನಿರ್ದೇಶಕ ವೆಂಕಟೇಶ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.