ಕೌಲಾಲಂಪುರ್: ಇಂದು ಬೆಳಗ್ಗೆ 9.30ರ ಸುಮಾರಿಗೆ ಲುಮುಟ್ ನೌಕಾ ನೆಲೆಯಲ್ಲಿ 2 ಹೆಲಿಕಾಪ್ಟರ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 10 ಮಂದಿ ದುರಂತ ಅಂತ್ಯ ಕಂಡಿದ್ದಾರೆ.
ಮಲೇಷಿಯಾದಲ್ಲಿ ನೌಕಾಪಡೆಯ 2 ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಸದ್ಯ ಹೆಲಿಕಾಪ್ಟರ್ಗಳ ಡಿಕ್ಕಿಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೆಲಿಕಾಪ್ಟರ್ ಗಳು ರಾಯಲ್ ಮಲೇಷಿಯನ್ ನೇವಿ ಪರೇಡ್ ಗಾಗಿ ಪೂರ್ವಾಭ್ಯಾಸ ಮಾಡುತ್ತಿದ್ದಾಗ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ಹೆಲಿಕಾಪ್ಟರ್ ನಲ್ಲಿದ್ದ 10 ಮಂದಿ ಸಿಬ್ಬಂದಿ ಮೃತಪಟ್ಟಿರುವ ಬಗ್ಗೆ ನೌಕಾಪಡೆ ದೃಢಪಡಿಸಿದೆ ಎಂದು ವರದಿ ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296