ಹಾಸನ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಬೈಕ್ ನಲ್ಲಿ ಬರುತ್ತಿದ್ದ ದಂಪತಿಗೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ನಡೆದಿದೆ. ಚಂದ್ರೇಗೌಡ(52) ಹೇಮಲತಾ (45) ಮೃತ ದುರ್ದೈವಿಗಳು.
ಮದುವೆ ಮುಗಿಸಿ ಬೈಕ್ ನಲ್ಲಿ ಬರುತ್ತಿದ್ದ ದಂಪತಿಗೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಹಾರಿ ಬಿದ್ದ ದಂಪತಿ ದಾರುಣವಾಗಿ ಮೃತಪಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ದಂಪತಿ ತಲೆಗೆ ತೀವ್ರ ಪೆಟ್ಟಾಗಿತ್ತು. ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಚನ್ನರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


