ಆನೇಕಲ್: ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ವೀರಸಂದ್ರ ಬಳಿ ರಾಯಲ್ ಇನ್ಫೀಲ್ಡ್ ಬೈಕ್ ಮತ್ತು ಕಾರಿನ ನಡುವೆ ಅಪಘಾತ ನಡೆದಿದೆ. ಪರಿಣಾಮ ಬೈಕ್ ನ ಹಿಂಬದಿ ಕುಳಿತಿದ್ದ ಮಹಿಳೆ ದಾರುಣವಾಗಿ ಮೃತಪಟ್ಟಿದ್ದಾರೆ. ಹೊಸೂರು ಮೂಲದ ಹಿಂದೂಮತಿ ಮೃತ ದುರ್ದೈವಿ.
ಸೋಮವಾರ ಬೆಳಗ್ಗೆ ಹೊಸೂರಿನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಬೈಕ್ ನಲ್ಲಿ ಬರುವಾಗ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಹಿಂದೂಮತಿ ತಲೆಗೆ ಗಂಭೀರ ಗಾಯಗೊಂಡಿದ್ದು, ಕೂಡಲೇ ಸ್ಥಳೀಯರು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರು ಹಾಗೂ ಬೈಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


