ಬೆಂಗಳೂರು: ಸ್ಕೂಟರ್ ಹಾಗೂ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಾವಿಗೀಡಾದ ಘಟನೆ ಮಲ್ಲೇಶ್ವರಂನ ಹರಿಶ್ಚಂದ್ರ ಘಾಟ್ ಬಳಿ ನಡೆದಿದೆ.
ಡಿಗ್ರಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕುಸುಮಿತ (22) ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಕುಸುಮಿತ ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ. ಕೂಡಲೇ ಆಕೆಯನ್ನು ಸ್ಥಳೀಯ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾರೆ.


