ಚಿಂತಾಮಣಿ: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಂತಾಮಣಿ-ಮದನಪಲ್ಲಿ ರಾಜ್ಯ ಹೆದ್ದಾರಿಯ ದಂಡುಪಾಳ್ಯ ಗೇಟ್ ಸಮೀಪ ಶನಿವಾರ ನಡೆದಿದೆ.
ಚಿಂತಾಮಣಿಯ ಗಾಂಧಿನಗರದ ದೇವರಾಜ್ (30) ಮೃತಪಟ್ಟವರಾಗಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸುಟ್ಟು ಕರಕಲಾಗಿದೆ.
ಬೆಂಗಳೂರಿನಿಂದ ಕಡಪಾ ಕಡೆಗೆ ಹೋಗುತ್ತಿದ್ದ ಕಾರು ದಂಡುಪಾಳ್ಯದ ಗೇಟ್ ಸಮೀಪದಲ್ಲಿ ಎದುರುಗಡೆಯಿಂದ ಚಿಂತಾಮಣಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಸವಾರ ದೇವರಾಜ್ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟರೆ, ಬೈಕ್‌ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಡಿವೈಎಸ್ಪಿ ಮುರಳೀಧರ್ ಮತ್ತು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ವಾಹನಗಳನ್ನು ಪಕ್ಕಕ್ಕೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q