ವಿಜಯನಗರ: ಖಾಸಗಿ ಬಸ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾದ ಘಟನೆ ಹೊಸಪೇಟೆ ತಾಲೂಕಿನ ಜಂಬಯ್ಯನ ಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಖಾಸಗಿ ಬಸ್ ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಬರುತ್ತಿತ್ತು. ಲಾರಿ ಹೊಸಪೇಟೆ ಕಡೆಯಿಂದ ಕೂಡ್ಲಿಗಿ ಕಡೆ ಹೊರಟಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


