ಕಾರವಾರ: ಟಾಟಾ ಏಸ್ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿದ್ದು, ಚಾಲಕ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಬೆಳಕೆ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ಮಹಿಳೆ ಸ್ಥಿತಿ ಗಂಭೀರವಾಗಿದ್ದು, ಗಾಯಗೊಂಡ ನಾಲ್ವರನ್ನು ಕುಂದಾಪುರ ಹಾಗೂ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಲ್ಲಿ ಆಟೋ ಸಂಪೂರ್ಣ ಛಿದ್ರಗೊಂಡಿದ್ದು, ಸ್ಥಳಕ್ಕೆ ಭಟ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.


