ತುಮಕೂರು: ತುಮಕೂರು ತಾಲೂಕಿನ ಹೆಗ್ಗೆರೆ ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಬೈಕ್ ಸವಾರ ಸಾವಿಗೀಡಾದ ಘಟನೆ ನಡೆದಿದ್ದು, ಅಪಘಾತದ ಪರಿಣಾಮ ಬೈಕ್ ಸವಾರನ ದೇಹ ಛಿದ್ರಛಿದ್ರಗೊಂಡಿದೆ.
ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಬೈಕ್ ಚಾಲಕ ಲಾರಿಯ ಚಕ್ರದಡಿಗೆ ಸಿಲುಕಿದ್ದಾನೆ. ಪರಿಣಾಮವಾಗಿ ಬೈಕ್ ಸವಾರನ ದೇಹವನ್ನು ಲಾರಿ ಎಳೆದುಕೊಂಡೇ ಹೋಗಿದ್ದು, ಕೆಲವೇ ಕ್ಷಣಗಳಲ್ಲಿ ಬೈಕ್ ಸವಾರನ ದೇಹ ಛಿದ್ರಛಿದ್ರಗೊಂಡು ರಸ್ತೆ ತುಂಬಾ ಹರಡಿದ ದೃಶ್ಯ ಕಂಡು ಬಂತು.
ಬೈಕ್ ಸವಾರನ ಮೃತದೇಹವು ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ಸ್ಥಿತಿಯಲ್ಲಿದ್ದು, ಮೃತ ವ್ಯಕ್ತಿ ಯಾರು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಈ ಅಪಘಾತ ಹೇಗೆ ಸಂಭವಿಸಿತು ಎನ್ನುವುದೂ ತಿಳಿದು ಬಂದಿಲ್ಲ. ಸದ್ಯ ಘಟನಾ ಸ್ಥಳದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಡಿಯೋ ನೋಡಲು ಸಾಧ್ಯವಾಗದಂತಹ ಸ್ಥಿತಿಯಲ್ಲಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700