ತುಮಕೂರು: ಮನೆಯೊಂದರಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿದ ಪರಿಣಾಮ ಮನೆ ಗೋಡೆ ಕುಸಿದು ಆರು ಮಂದಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ನಗರದ ಮಧುಗಿರಿ ರಸ್ತೆಯ ಪಾರ್ಕ್‌ನಲ್ಲಿ ಘಟನೆ ನಡೆದಿದೆ.
ಮೊಹಲ್ಲಾದ ನಜೀರ್ ಎಂಬುವವರ ಮನೆ ಕುಸಿದು ಬಿದ್ದಿದೆ. ಸ್ಫೋಟಕ್ಕೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಸ್ಫೋಟದಲ್ಲಿ ಆರು ಮಂದಿ ಗಾಯಗೊಂಡಿದ್ದು, ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಆಕಸ್ಮಿಕ ಸ್ಪೋಟಕ್ಕೆ ಕುಸಿದು ಬಿದ್ದ ಮನೆ ಗೋಡೆ ಆರಂಭದಲ್ಲಿ ಸಿಲಿಂಡರ್ ಸ್ಫೋಟ ಎಂಬ ಅನುಮಾನ ವ್ಯಕ್ತವಾಗಿತ್ತು. ಆದರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಸಿಲಿಂಡರ್ ಸ್ಫೋಟವಲ್ಲ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಶಾಸಕ ಟಿ.ಬಿ.ಜಯಚಂದ್ರ ಭೇಟಿ ನೀಡಿದ್ದು, ತುಮಕೂರು ಎಸ್ ಪಿ ಕೆ.ವಿ.ಅಶೋಕ್ ಬಳಿ ಮಾಹಿತಿ ಪಡೆದಿದ್ದಾರೆ. ಸ್ಫೋಟದ ಹಿಂದಿರುವ ಕಾರಣವನ್ನು ತಿಳಿಸಲು ಸೂಚಿಸಿದ್ದಾರೆ. ಇತ್ತ ಸ್ಥಳಕ್ಕೆ ಬಾಂಬ್ ನಿಷ್ಟ್ರೀಯ ದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.