ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿಯಲ್ಲಿ ಗುಡಿಸಲುಗಳಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಭಾರೀ ಅನಾಹುತವೊಂದು ತಪ್ಪಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಗೆ ಹತ್ತಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ.
ಕರ್ತವ್ಯ ನಿರತ ಚುನಾವಣಾ ಅಧಿಕಾರಿಗಳು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಗುಡಿಸಲಿನಲ್ಲಿದ್ದ ದಿನಸಿ, ಬಟ್ಟೆ, ವಸ್ತುಗಳು ಭಸ್ಮವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳವರು ಬೆಂಕಿ ನಂದಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296