nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    February 23, 2026

    ಕಾರವಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    February 23, 2026

    ಜೆಡಿಎಸ್ ಬೆಳ್ಳಿಹಬ್ಬ: ಮಾರ್ಚ್ 2ರಂದು ನಿಖಿಲ್ ಕುಮಾರಸ್ವಾಮಿ ತಿಪಟೂರಿಗೆ

    February 23, 2026
    Facebook Twitter Instagram
    ಟ್ರೆಂಡಿಂಗ್
    • ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
    • ಕಾರವಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಜೆಡಿಎಸ್ ಬೆಳ್ಳಿಹಬ್ಬ: ಮಾರ್ಚ್ 2ರಂದು ನಿಖಿಲ್ ಕುಮಾರಸ್ವಾಮಿ ತಿಪಟೂರಿಗೆ
    • ಕೇಕ್ ಬಿಡಿ — ಸಸಿನೆಡಿ: ಮೊಬೈಲ್ ಬಿಡಿ–ಪುಸ್ತಕ ಹಿಡಿ:  ಸಿದ್ದಗಂಗಾ ಶ್ರೀಗಳ ಉದ್ಯಾನವನದಲ್ಲಿ ವಿನಯ್ ವಿನೂತನ ಜನ್ಮದಿನ
    • ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ
    • ಆರೋಗ್ಯ ಮತ್ತು ಕ್ಷೇಮಾ ಕೇಂದ್ರ ನಿರ್ಮಾಣಕ್ಕೆ ನಿವೇಶನ ಮಂಜೂರು: ಸಚಿವ ಪರಮೇಶ್ವರ್ ಅವರ ಕನಸಿನ ಕೂಸು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜಕೀಯ ಸ್ಥಿತಿಗತಿಗಳಿಗೆ ಅನುಸಾರವಾಗಿ ಜಿಲ್ಲೆಗೆ ಎರಡು ಸಚಿವ ಸ್ಥಾನ ನೀಡಲಾಗಿದೆ: ಸತೀಶ್ ಜಾರಕಿಹೊಳಿ
    ರಾಜ್ಯ ಸುದ್ದಿ May 29, 2023

    ರಾಜಕೀಯ ಸ್ಥಿತಿಗತಿಗಳಿಗೆ ಅನುಸಾರವಾಗಿ ಜಿಲ್ಲೆಗೆ ಎರಡು ಸಚಿವ ಸ್ಥಾನ ನೀಡಲಾಗಿದೆ: ಸತೀಶ್ ಜಾರಕಿಹೊಳಿ

    By adminMay 29, 2023No Comments2 Mins Read
    sathis jarakiholli

    ಬೆಳಗಾವಿ: ರಾಜಕೀಯ ಸ್ಥಿತಿಗತಿಗಳಿಗೆ ಅನುಸಾರವಾಗಿ ಜಿಲ್ಲೆಗೆ ಎರಡು ಸಚಿವ ಸ್ಥಾನಗಳನ್ನಷ್ಟೇ ನೀಡಲಾಗಿದೆ. ಇದು ಕೇವಲ ಬೆಳಗಾವಿ ಜಿಲ್ಲೆಗಷ್ಟೇ ಅನ್ವಯಿಸುವುದಿಲ್ಲ. ಸಚಿವ ಸ್ಥಾನ ಸಿಗಲಿಲ್ಲವೆಂಬ ಅಸಮಾಧಾನಗಳು, ಆ ಕುರಿತ ಆರೋಪಗಳು ಸಹಜ. ಮುಂಬರುವ ದಿನಗಳಲ್ಲಿ ಎಲ್ಲರಿಗೂ ಯೋಗ್ಯ ಹುದ್ದೆಗಳನ್ನು ನೀಡಲಾಗುತ್ತಿದೆ ಎಂದು ನೂತನ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

    ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಬೆಳಗಾವಿಗೆ ಹಿಂದಿರುಗಿದ ವೇಳೆ ಭಾನುವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕರಾಗಿದ್ದ ವೇಳೆ ಕೈಗೊಂಡ ಅನೇಕ ಅಭಿವೃದ್ಧಿ ಕಾಮಗಾರಿಗಳು ಅಪೂರ್ಣವಾಗಿದ್ದು, ಅವುಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು ಎಂದರು.


    Provided by
    Provided by

    ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸತೀಶ ಜಾರಕಿಹೊಳಿ, ಅದನ್ನೆಲ್ಲ ನೋಡೋಣ. ಕಾಂಗ್ರೆಸ್ ಸರಕಾರವಂತೂ ಇದ್ದೇ ಇರುತ್ತದೆ. 50:50: ಇರುತ್ತದೆಯೋ, 12:12: ಇರುತ್ತದೆಯೋ ಅದು ಗೊತ್ತಿಲ್ಲ ಎಂದರು.ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, “ಆಯಾ ಇಲಾಖೆ ಸಚಿವರು ಈ ಬಗ್ಗೆ ನಿರ್ಧರಿಸುತ್ತಾರೆ. ಯಾವುದೇ ಯೋಜನೆ ಅವಶ್ಯಕತೆ ಇದ್ದರೆ, ಜನಪರವಾಗಿದ್ದರೆ ಅದನ್ನು ಮುಂದುವರಿಸಲಾಗುತ್ತದೆ” ಎಂದು ಸತೀಶ ಜಾರಕಿಹೊಳಿ ಹೇಳಿದರು.

    ಗ್ಯಾರಂಟಿ ಜಾರಿಗೆ ಸಮಯ ನೀಡಲಿ: ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಪ್ರತಿಕ್ರಿಯಿಸಿದ ಸತೀಶ ಜಾರಕಿಹೊಳಿ, “ಗ್ಯಾರಂಟಿ ಯೋಜನೆಗಳ ಜಾರಿಗೆ ಬಿಜೆಪಿಯವರು ಸಮಯ ನೀಡಬೇಕು. ನಾವು ನಿರ್ದಿಷ್ಟ ಸಮಯದಲ್ಲಿ ಜಾರಿ ಮಾಡದಿದ್ದರೆ ಪ್ರತಿಭಟಿಸಲಿ. ಯಾವುದಕ್ಕೂ ಸಮಯ ಬೇಕಿದೆ ಎಂದರು.

    ನಂತರ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ, ಪ್ರಾಥಮಿಕ ಪೂರ್ವ ಶಿಕ್ಷಣದಲ್ಲಿ ಗುರುತರ ಬದಲಾವಣೆಗಳನ್ನು ಮಾಡಬೇಕೆಂಬ ಉದ್ದೇಶವಿದೆ. ಅದಕ್ಕೂ ಮುನ್ನ ಇಲಾಖೆಯ ಸಮಗ್ರ ಮಾಹಿತಿಗಳನ್ನು ಅರಿತು ನಿರ್ಧಾರ ಕೈಗೊಳ್ಳಲಿದ್ದೇನೆ ಎಂದರು.

    ಇನ್ನೂ ಇಲಾಖೆಗಳ ಅಧಿಕೃತವಾದ ಹಂಚಿಕೆ ಆಗಿಲ್ಲ. ಕೊಟ್ಟ ಇಲಾಖೆಯ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಿದ್ದು, ಭ್ರಷ್ಟಾಚಾರ ಮುಕ್ತವಾದ ಆಡಳಿತ ನೀಡಬೇಕೆಂಬ ಉದ್ದೇಶ ಹೊಂದಲಾಗಿದೆ. ಆ ಮೂಲಕ ಸರಕಾರಕ್ಕೆ, ಮುಖ್ಯಮಂತ್ರಿಗಳಿಗೆ ಒಳ್ಳೆಯ ಹೆಸರು ಬರುವಂತೆ ಕಾರ್ಯ ನಿರ್ವಹಿಸಲಾಗುವುದು” ಎಂದು ಅವರು ತಿಳಿಸಿದರು. ಜಿಲ್ಲೆಗೆ ಹೊಸ ಯೋಜನೆಗಳನ್ನೇನಾದರೂ ತರುವ ಉದ್ದೇಶದ ಬಗ್ಗೆ ಪ್ರಶ್ನಿಸಿದಾಗ ಅಂಥ ಗುರಿ ಇದ್ದು, ಈಗಾಗಲೆ ಚರ್ಚಿಸಲಾಗಿದೆ. ಮುಂಬರುವ ದಿನಗಳಲ್ಲಿ ಎಲ್ಲವನ್ನೂ ತಿಳಿಸಲಾಗುತ್ತದೆ ಎಂದರು.

    ವಿಮಾನ ನಿಲ್ದಾಣದ ಬಳಿ ಇಬ್ಬರೂ ನೂತನ ಸಚಿವರನ್ನು ಅಭಿಮಾನಿಗಳು, ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಸೇರಿ ಸ್ವಾಗತ ಕೋರಿದರು. ಅಲ್ಲಿಂದ ಲಕ್ಷ್ಮೀ ಹೆಬ್ಬಾಳಕರ್ ಸುಳೇಬಾವಿಗೆ ತೆರಳಿ ಮಹಾಲಕ್ಷ್ಮಿಯ ದರ್ಶನ, ಆಶಿರ್ವಾದ ಪಡೆದರು. ರಸ್ತೆಯುದ್ದಕ್ಕೂ ಜನರು ಪಟಾಕಿಗಳನ್ನು ಸಿಡಿಸಿ, ಅದ್ದೂರಿಯಾಗಿ ಸ್ವಾಗತಿಸುತ್ತಿದ್ದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕ ವಿಶ್ವಾಸ ವೈದ್ಯ, ಮಾಜಿ ಶಾಸಕ ಶಾಮ ಘಾಟಗೆ ಸೇರಿದಂತೆ ಇತರರು ಇದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    February 23, 2026

    ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 22, 2026

    ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    February 22, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    February 23, 2026

    ಕಾರವಾರ: ಅಂಕೋಲಾ ಮತ್ತು ಕುಮಟಾ ತಾಲೂಕಿನ ಜನತೆಯ ಬಹಳ ದಿನದ ಬೇಡಿಕೆಯಾದ, ಅಂಕೋಲಾದ ಮಂಜಗುಣಿ ಮತ್ತು ಕುಮಟಾ ತಾಲೂಕಿನ ಗಂಗಾವಳಿ…

    ಕಾರವಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    February 23, 2026

    ಜೆಡಿಎಸ್ ಬೆಳ್ಳಿಹಬ್ಬ: ಮಾರ್ಚ್ 2ರಂದು ನಿಖಿಲ್ ಕುಮಾರಸ್ವಾಮಿ ತಿಪಟೂರಿಗೆ

    February 23, 2026

    ಕೇಕ್ ಬಿಡಿ — ಸಸಿನೆಡಿ: ಮೊಬೈಲ್ ಬಿಡಿ–ಪುಸ್ತಕ ಹಿಡಿ:  ಸಿದ್ದಗಂಗಾ ಶ್ರೀಗಳ ಉದ್ಯಾನವನದಲ್ಲಿ ವಿನಯ್ ವಿನೂತನ ಜನ್ಮದಿನ

    February 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.