ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಮದನ್ ಪಲ್ಲಿ ಮೂಲದ ಕೆ.ನರೇಶ್ ಪಟ್ಯಂ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.
ಆ.29ರಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಪಿ.ಜಿಗೆ ನುಗ್ಗಿದ್ದ ಅಪರಿಚಿತ ವ್ಯಕ್ತಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಸದ್ದುಗುಂಟೆಪಾಳ್ಯ ಠಾಣಾ ವ್ಯಾಪ್ತಿಯ ಪಿಜಿಯಲ್ಲಿ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಆರೋಪಿ ಯುವತಿಯ ರೂಮ್‌ಗೆ ನುಗ್ಗಿದಾಗ ಆಕೆ ರೂಮ್ ಮೇಟ್ ಇರಬಹುದು ಅಂದುಕೊಂಡಿದ್ದಳು. ಕಾಮುಕ ಮೊದಲೇ ಪಿಜಿ ಫ್ಲೋರ್ ನ ಎಲ್ಲಾ ರೂಮ್ ಡೋರ್ ಗಳನ್ನು ಲಾಕ್ ಮಾಡಿ, ಬಳಿಕ ಯುವತಿ ಬಳಿ ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೇ ಚಾಕು ತೋರಿಸಿ ಬೆದರಿಕೆ ಹಾಕಿದ್, ಈ ವೇಳೆ ಪ್ರತಿರೋಧ ತೋರಿದ ಯುವತಿಗೆ ಥಳಿಸಿ ಆಕೆಯನ್ನು ಎಳೆದಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದ. ಸದ್ಯ ಆರೋಪಿಯನ್ನ ಸದ್ದುಗುಂಟೆಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC