ಕೊರಟಗೆರೆ: ಹೊಸ ಮನೆ ಕಟ್ಟುವ ಸಂದರ್ಭದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಆಕೆಯನ್ನ 6 ತಿಂಗಳ ಗರ್ಭಿಣಿಯನ್ನಾಗಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೋಕ್ಸೋ ಕಾಯ್ದೆ ಅಡಿ ಕೊರಟಗೆರೆ ಪೊಲೀಸ್ ಅಧಿಕಾರಿಗಳು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಲೋಕೇಶ್ (48 ) ಎಂಬಾತ ಕೃತ್ಯ ನಡೆಸಿದ ಆರೋಪಿಯಾಗಿದ್ದಾನೆ. 9ನೇ ತರಗತಿಯ ವಿದ್ಯಾರ್ಥಿನಿಯನ್ನ ಆಕೆಯ ಮನೆಯವರು ಮನೆಯಲ್ಲಿ ಇಲ್ಲದಿರುವ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಎಸಗಿ 6 ತಿಂಗಳ ಗರ್ಭಿಣಿಯನ್ನಾಗಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೊರಟಗೆರೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಿಂದ ಆರ್ ಬಿ ಎಸ್ ಕೆ ತಂಡ ವೈದ್ಯಕೀಯ ಪರೀಕ್ಷೆ ನಡೆಸಲು ಶಾಲೆಗೆ ಹೋದ ಸಂದರ್ಭದಲ್ಲಿ ವಿದ್ಯಾರ್ಥಿನಿಯ ಆರೋಗ್ಯ ತಪಾಸಣೆಯ ಸಂದರ್ಭದಲ್ಲಿ ಗರ್ಭವತಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಈ ಸಂಬಂಧ ಪೋಷಕರು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು , ಸಿಪಿಐ ಅನಿಲ್ ಕುಮಾರ್ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx