nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ

    July 9, 2026

    175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ

    July 9, 2026

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026
    Facebook Twitter Instagram
    ಟ್ರೆಂಡಿಂಗ್
    • ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
    • 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
    • ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
    • ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
    • ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
    • ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
    • ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
    • ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 30 ವರ್ಷ ಕಠಿಣ ಜೈಲುಶಿಕ್ಷೆ
    ರಾಜ್ಯ ಸುದ್ದಿ October 19, 2023

    ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 30 ವರ್ಷ ಕಠಿಣ ಜೈಲುಶಿಕ್ಷೆ

    By adminOctober 19, 2023No Comments2 Mins Read
    judgement

    ಉಡುಪಿ: ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ವರ್ಷಗಳ ಹಿಂದೆ ನಡೆದ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 30 ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ನ್ಯಾಯಾಲಯವು ಬುಧವಾರ ಆದೇಶಿಸಿದೆ.

    ಬೈಂದೂರು ತಾಲೂಕಿನ‌ ಹೆರಂಜಾಲು ಗ್ರಾಮದ ಗಿರೀಶ್(24) ಶಿಕ್ಷೆಗೆ ಗುರಿಯಾದ ಆರೋಪಿ. 15 ವರ್ಷ ವಯಸ್ಸಿನ ನೊಂದ ಬಾಲಕಿ ತನ್ನ ಚಿಕ್ಕಮ್ಮನ ಮನೆಯಲ್ಲಿ ವಾಸಮಾಡಿಕೊಂಡಿದ್ದು, ತನ್ನ ತಾಯಿ ಮನೆಗೆ ಹೋಗಿ ಬರುತ್ತಿರುವ ವೇಳೆ ನೆರೆಮನೆಯ ಗಿರೀಶ್ ನೊಂದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಪ್ರೀತಿಸುತ್ತೇನೆಂದು ತಿಳಿಸಿದ್ದನು.

    2021ರ ಆಗಸ್ಟ್ ತಿಂಗಳಲ್ಲಿ ಬೈಕ್‌ನಲ್ಲಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ ಆತ, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದನು. ಇದರ ಪರಿಣಾಮ ಆಕೆ ಗರ್ಭ ಧರಿಸಿದ್ದರು. ಆಕೆಯ ದೇಹದ ಬದಲಾವಣೆಯನ್ನು ಗಮನಿಸಿದ ಆಕೆಯ ಚಿಕ್ಕಮ್ಮ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ ಆಕೆ ಗರ್ಭಿಣಿಯಾಗಿರುವ ವಿಚಾರ ತಿಳಿದುಬಂತು. ಅದರಂತೆ ನೊಂದ ಬಾಲಕಿ ನೀಡಿದ ದೂರಿನಂತೆ ಅಂದಿನ ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೆ.ಆರ್.ತನಿಖೆ ನಡೆಸಿ ಆರೋಪಿಯ ವಿರುದ್ಧ ದೋಷರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

    ಒಟ್ಟು 24 ಸಾಕ್ಷಿಗಳ ಪೈಕಿ 14 ಸಾಕ್ಷಿಗಳ ವಿಚಾರಣೆ ನಡೆಸಲಾಯಿತು. ವಿಚಾರಣೆ ವೇಳೆ ನೊಂದ ಬಾಲಕಿಯು ಅಭಿಯೋಜನೆಗೆ ಪೂರಕ ಸಾಕ್ಷಿ ನೀಡಿದ್ದು, ಸಾಂದರ್ಭಿಕ ಸಾಕ್ಷಿ ಮತ್ತು ಡಿಎನ್‌ಎ ವರದಿ ಕೂಡ ಅಭಿಯೋಜನೆಗೆ ಪೂರಕವಾಗಿ ಸಾಕ್ಷಿ ನುಡಿದಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿಯು ದೌರ್ಜನ್ಯ ಎಸಗಿರುವುದು ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟು ಆರೋಪಿಗೆ ಅತ್ಯಾಚಾರ ಪ್ರಕರಣಕ್ಕೆ 10 ವರ್ಷ ಶಿಕ್ಷೆ ಹಾಗೂ 10 ಸಾವಿರ ರೂ.ದಂಡ, ಆಕೆ ಗರ್ಭವತಿಯಾಗಲು ಕಾರಣವಾಗಿದ್ದಕ್ಕೆ 20 ವರ್ಷ ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿ ಆದೇಶ ನೀಡಿದರು.

    ದಂಡ ತೆರಲು ತಪ್ಪಿದರೆ ಒಂದು ವರ್ಷ ಹೆಚ್ಚುವರಿ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ದಂಡದ ಮೊತ್ತದಲ್ಲಿ 5 ಸಾವಿರ ರೂ. ಸರಕಾರಕ್ಕೆ, 15 ಸಾವಿರ ರೂ. ನೊಂದ ಬಾಲಕಿಗೆ ಮತ್ತು ಸರಕಾರದಿಂದ ನೊಂದ ಬಾಲಕಿಗೆ 20 ಸಾವಿರ ರೂ.ಪರಿಹಾರ ನೀಡುವಂತೆ ಆದೇಶಿಸಿದೆ. ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದಾರೆ.


    Provided by
    Provided by
    admin
    • Website

    Related Posts

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ

    July 9, 2026

    ತುಮಕೂರು: ಗ್ರಾಮಗಳಲ್ಲಿ ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ನೂತನ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದ್ದು, ಅದನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಎಂದು…

    175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ

    July 9, 2026

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.