ಬೆಂಗಳೂರು: ಡಿ.ಕೆ. ಶಿವಕುಮಾರ್ ದೆಹಲಿ ನಿವಾಸಗಳ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದುಬೈಗೆ ತೆರಳಲು ಅನುಮತಿ ಕೋರಿ ಡಿಸಿಎಂ ಡಿ.ಕೆ. ಶಿವಕುಮಾರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಐಟಿ ಪ್ರಕರಣದಲ್ಲಿ ಆರೋಪಿಯಾಗಿರುವ ಡಿ.ಕೆ. ಶಿವಕುಮಾರ್ ವಿಶ್ವಸಂಸ್ಥೆಯ ಪರಿಸರ ಸಮ್ಮೇಳನದಲ್ಲಿ ಭಾಗವಹಿಸಲು ತೆರಳಬೇಕಿದೆ.
ಹೀಗಾಗಿ ನ.29ರಿಂದ ಡಿ.3ರವರೆಗೆ ತೆರಳಲು ಅನುಮತಿ ಕೋರಿದ ಅರ್ಜಿಯನ್ನು ವಿಚಾರಣೆ ನಡೆಸಿ ನ್ಯಾಯಾಧೀಶೆ ಜೆ. ಪ್ರೀತ್ ಅವರು ಅನುಮತಿ ನೀಡಿದ್ದಾರೆ.


