ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಆರೋಪಿ ಮುನಿರತ್ನನನ್ನು ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆ ಪೋಲೀಸರು ಬಿಜೆಪಿ ಶಾಸಕ ಮುನಿರತ್ನ ಅವರನ್ನು ಮತ್ತೆ ಬಂಧಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296