ತುಮಕೂರು: ಕಳವು ಮಾಲು ಸ್ವೀಕರಿಸಿದ ಆರೋಪದ ಮೇರೆಗೆ ಅಟ್ಟಿಕಾ ಗೋಲ್ಡ್ ಕಂಪನಿಯ ಬಾಬು @ಪಿ.ಎಸ್.ಅಯ್ಯೂಬ್ ಬಿನ್ ಸೈಯದ್ ಬಾಷಾ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಅಟ್ಟಿಕ ಬಾಬು ಮನೆಯ ಬಳಿ ವಶಕ್ಕೆ ಪಡೆದಿರುವ ಬಗ್ಗೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುರುವೇಕೆರೆ ಪೊಲೀಸ್ ವೃತ್ತ ನಿರೀಕ್ಷಕ ಲೋಹಿತ್ ಬಿ.ಎನ್ ಮತ್ತು ಸಿಬ್ಬಂದಿಯವರು ಕುಣಿಗಲ್ ಡಿ.ಎಸ್.ಪಿ ರವರ ಮತ್ತು ತುಮಕೂರಿನ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹಾಗೂ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ತುರುವೇಕೆರೆ ಪೊಲೀಸ್ ಠಾಣಾ ಮೊ.ನಂ-185/2023 ಕಲಂ–454, 380, 411, 413 ಐಪಿಸಿ ಪ್ರಕರಣದಲ್ಲಿ ಕಳುವು ಮಾಲು ಸ್ವೀಕರಿಸಿರುವ ಆರೋಪಿಯನ್ನಾಗಿ ಪರಿಗಣಿಸಲಾಗಿತ್ತು.
ಅಟ್ಟಿಕಾ ಗೋಲ್ಡ್ ಕಂಪನಿಯ ನಿರ್ದೇಶಕರು, ನಂ–ಟಿ–3, ಮರಿಯಮ್ಮ ಅಪಾರ್ಟ್ಮೆಂಟ್ಸ್, ಪ್ರೆಜರ್ ಟೌನ್ ಬೆಂಗಳೂರು ಇವರನ್ನು ಜೂನ್ 26ರಂದು ಸಂಜೆ 6.00 ಗಂಟೆಗೆ ಬೆಂಗಳೂರಿನ ಇವರ ಮನೆಯ ಬಳಿ ಬಂಧಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA