ಬೆಂಗಳೂರು: ತಮ್ಮ ವಿರುದ್ಧ ರೌಡಿಪಟ್ಟಿ ತೆರೆದಿರುವುದಕ್ಕೆ ರಾಜ್ಯ ಸರ್ಕಾರ ಸ್ಪಷ್ಟಿಕರಣ ನೀಡುವವರೆಗೂ ಉಪವಾಸ ಸತ್ಯಾಗ್ರಹ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿರುವ ಹಿಂದೂ ಪರ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆ ಯತ್ನದ ಆರೋಪದಡಿ ಉಪ್ಪಾರಪೇಟೆ ಠಾಣೆಯ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.


