‘ಬಿಗ್ ಬಾಸ್’ ಮಾಜಿ ಸ್ಪರ್ಧಿ ರಕ್ಷಕ್ ಬುಲೆಟ್ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ ಎನ್ನುವ ವಿವಾದ ನಡುವೆಯೇ ಇದೀಗ ರಕ್ಷಕ್ ಕ್ಷಮೆಯಾಚಿಸಿದ್ದಾರೆ.
ಯಾರಿಗಾದರೂ ಬೇಸರವಾಗಿದ್ದಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಇಂತಹ ಆಚಾತುರ್ಯ ನಡೆಯೋದಿಲ್ಲ ಎಂದು ಮನವಿ ಮಾಡಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ರಕ್ಷಕ್, ಇತ್ತೀಚೆಗೆ ಒಂದು ರಿಯಾಲಿಟಿ ಶೋನಲ್ಲಿ ನಾನು ಒಂದು ಹೆಸರಾಂತ ಚಿತ್ರದ ಡೈಲಾಗ್ ಅನ್ನು ಒಂದು ಸ್ಕಿಟ್ ನಲ್ಲಿ ಹೇಳಿದ್ದೆ, ಅದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ನನ್ನ ತಂದೆಯವರಾದ ದಿವಂಗತ ಬುಲೆಟ್ ಪ್ರಕಾಶ್ ಅವರು ನನ್ನ ತಾಯಿ ಹಾಗೂ ಕುಟುಂಬಸ್ಥರು ಪರಮ ಭಕ್ತರು. ನಮ್ಮ ತಂದೆಯವರು ಇದ್ದಾಗಿನಿಂದಲೂ ನಾವು ತಾಯಿ ಚಾಮುಂಡೇಶ್ವರಿಗೆ ಪೂಜೆ ಮಾಡುತ್ತಾ ನಡೆದುಕೊಂಡು ಬಂದಿದ್ದೇವೆ.
ನಾವು ಉದ್ದೇಶಪೂರ್ವಕವಾಗಿ ತಾಯಿ ಚಾಮುಂಡೇಶ್ವರಿ ಬಗ್ಗೆ ಹೇಳುವಷ್ಟು ದೊಡ್ಡವನಲ್ಲ. ಆ ತಾಯಿಯ ಆಶೀರ್ವಾದದಿಂದ ನಾನು ಬೆಳೆಯುತ್ತಿದ್ದೇನೆ. ನಾನು ಯಾವುದೇ ಕಾರ್ಯ ಪ್ರಾರಂಭಿಸಬೇಕಾದರೆ ಮೊದಲು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ನಂತರ ಕೆಲಸವನ್ನು ಆರಂಭಿಸುತ್ತೇನೆ. ನಾನು ಭಕ್ತಾಧಿಗಳ ಭಾವನೆಗಳಿಗಾಗಲಿ ಮನಸ್ಸಿಗಾಗಲಿ ನೋವುಂಟು ಮಾಡುವ ಕೆಲಸ ಮಾಡುವುದಿಲ್ಲ. ಯಾರಿಗಾದರೂ ಬೇಸರವಾಗಿದ್ದಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಇಂತಹ ಆಚಾತುರ್ಯ ನಡೆಯೋದಿಲ್ಲ ಎಂದು ರಕ್ಷಕ್ ಕ್ಷಮೆ ಕೋರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4