ಲಖನೌ: ‘ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಕೊಟ್ವಾಲಿಯಲ್ಲಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ಅನ್ವರ್ ಜಮೀಲ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ವಿಡಿಯೋ ಕಾಣಿಸಿಕೊಂಡ ನಂತರ ಜಮೀಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ.
ವಿಡಿಯೋ ಪ್ರಸಾರವಾದ ನಂತರ ಅನ್ವರ್ ಜಮೀಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಾವು ಪ್ರಸ್ತುತ ಬಂಧಿತ ವ್ಯಕ್ತಿಯನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಅಧಿಕಾರಿ ರಾಜುಕುಮಾರ್ ಸವ್ಸಾಯಿದ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಈ ವಿಡಿಯೋ ಹಳೆಯ ವಿಡಿಯೋವಾಗಿದ್ದು, ತನ್ನ ಸ್ನೇಹಿತನೊಂದಿಗೆ ನಡೆದ ಬೆಟ್ಟಿಂಗ್ನಲ್ಲಿ ತಾನು ಈ ಘೋಷಣೆಗಳನ್ನು ಕೂಗಿದ್ದೆ ಎಂದು ಆರೋಪಿ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————