ಮುಂಬೈ: ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿದಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದ ಥಾಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೊಹಮ್ಮದ್ ಸರಿಫುಲ್ ಇಸ್ಲಾಂ ಶೆಹಜಾದ್ ಬಂಧಿತ ಆರೋಪಿಯಾಗಿದ್ದಾನೆ.. ಆತನನ್ನು ಸೈಫ್ ನಿವಾಸದಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ಕಾಸರ್ವಾಡವಲಿಯ ಹಿರಾನಂದಾನಿ ಎಸ್ಟೇಟ್ ಬಳಿ ಬಂಧಿಸಲಾಗಿದೆ.
ದುಷ್ಕರ್ಮಿ ಥಾಣೆಯ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದ. ಪೊಲೀಸರಿಗೆ ಸಿಕ್ಕಿಬೀಳುವ ಭಯದಿಂದ ಆತ ತನ್ನ ಹೆಸರನ್ನು ವಿಜಯ್ ದಾಸ್ ಎಂದು ಹೇಳಿಕೊಂಡಿದ್ದನಂತೆ.,
ಗುರುವಾರ ಮುಂಜಾನೆ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಆರೋಪಿ ದಾಳಿ ನಡೆಸಿದ್ದ. ಆರು ಬಾರಿ ಇರಿತಕ್ಕೊಳಗಾಗಿದ್ದ ಸೈಫ್ ಅವರನ್ನು ಆಟೋರಿಕ್ಷಾದಲ್ಲಿ ನಗರದ ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಬಳಿಕ ಅಲ್ಲಿ ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ನೀಡಿ, ಐದು ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಬಳಿಕ ಅವರ ಬೆನ್ನುಮೂಳೆಯಿಂದ 2.5 ಇಂಚಿನ ಚಾಕುವಿನ ತುಂಡನ್ನು ತೆಗೆಯಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx