ಬೆಂಗಳೂರು: ಮನೆ ಬಾಗಿಲಿಗೆ ಹಾಕಿದ್ದ ಬೀಗ ಒಡೆದು ಚಿನ್ನಾಭರಣ ಹಾಗೂ ನಗದು ಕಳವು ಮಾಡುತ್ತಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ರಾಮನಗರ ಜಿಲ್ಲೆ ಕನಕಪುರದ ಕುರುಪೇಟೆಯ ಗೋಪಿನಾಥ್ ಅಲಿಯಾಸ್ ಗೋಪಿ ಬಂಧಿತ ಆರೋಪಿ, ಈತ ನಗರದ ಕೋಣನಕುಂಟೆಯ ಬೀರೇಶ್ವರ ನಗರದಲ್ಲಿ ನೆಲೆಸಿದ್ದ. ಬಂಧಿತನಿಂದ 76.50 ಲಕ್ಷದ 107 ಚಿನ್ನಾಭರಣ, 1.14 ಲಕ್ಷ ನಗದು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


