nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಲು ಆರೋಪಿಗಳಿಗೆ ವಿದೇಶದಿಂದ ಹಣ ಸಂದಾಯ!
    ರಾಜ್ಯ ಸುದ್ದಿ April 9, 2024

    ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಲು ಆರೋಪಿಗಳಿಗೆ ವಿದೇಶದಿಂದ ಹಣ ಸಂದಾಯ!

    By adminApril 9, 2024No Comments2 Mins Read
    cafe

    Provided by
    Provided by

    ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಮುಸಾವೀರ್‌ ಹುಸೇನ್‌ ಶಾಜಿಬ್‌ ನೇ ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನ ಇಟ್ಟಿದ್ದು ಎಂದು ಎನ್ ‌ಐಎ ತಿಳಿಸಿದ ಬೆನ್ನಲ್ಲೇ, ಸ್ಫೋಟದ ಆರೋಪಿಗೆ ವಿದೇಶದಿಂದ ಹಣ ಹರಿದುಬಂದಿದೆ ಎಂದು ಗುಪ್ತಚರ ಇಲಾಖೆ ಮೂಲಗಳು ತಿಳಿಸಿವೆ.

    ಇದು ಈಗ ಭಾರಿ ಸಂಚಲನ ಮೂಡಿಸಿದೆ. “ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಲು ಆರೋಪಿಗಳಿಗೆ ವಿದೇಶದಿಂದ ಹಣ ಸಂದಾಯವಾಗಿದೆ. ಕ್ರಿಪ್ರೋಕರೆನ್ಸಿ ಮೂಲಕ ಇವರಿಗೆ ಹಣ ಸಂದಾಯವಾಗಿದೆ. ದೇವಾಲಯಗಳನ್ನು ಗುರಿಯಾಗಿಸದೆ, ಹೋಟೆಲ್‌ ಗಳಲ್ಲಿ ಬಾಂಬ್‌ ಸ್ಫೋಟಿಸಿ, ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಸಬೇಕು ಎಂಬುದು ಇವರ ಉದ್ದೇಶವಾಗಿತ್ತು. ಹಾಗಾಗಿ, ಇವರಿಗೆ ವಿದೇಶಿ ಹ್ಯಾಂಡ್ಲರ್‌ ಗಳು ಕ್ರಿಪ್ಟೋ ಮೂಲಕ ಹಣ ಸಂದಾಯ ಮಾಡಿದ್ದಾರೆ. ಈಗಲೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದರೆ, ಅದಕ್ಕೆ ವಿದೇಶಿ ಹಣ ರವಾನೆಯಾಗಿರುವುದೇ ಕಾರಣ” ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವನಾದ ಮುಸಾವೀರ್‌ ಹುಸೇನ್‌ ಶಾಜಿಬ್‌ ಬಾಂಬಿಟ್ಟವನು ಎಂಬುದಾಗಿ ತನಿಖೆಯಿಂದ ಗೊತ್ತಾಗಿದೆ. ಅಬ್ದುಲ್‌ ಮಥೀನ್‌ ತಾಹಾ ಎಂಬುವನು ಕೂಡ ಪ್ರಕರಣದಲ್ಲಿ ಪ್ರಮುಖ ಪಿತೂರಿದಾರನಾಗಿದ್ದಾನೆ.

    ಮುಜಾಮಿಲ್‌ ಷರೀಫ್‌ ನು ಬಾಂಬ್‌ ತಯಾರಿಸಲು ಇವರಿಗೆ ಹಲವು ವಸ್ತುಗಳನ್ನು ಪೂರೈಕೆ ಮಾಡಿದ್ದಾನೆ ಎಂಬುದು ತನಿಖೆಯ ವೇಳೆ ಬಹಿರಂಗವಾಗಿದೆ. ಮುಜಾಮಿಲ್‌ ಷರೀಫ್‌ ನನ್ನು ಪೊಲೀಸ್‌ ಕಸ್ಟಡಿಯಲ್ಲಿ ವಿಚಾರಣೆ ಮಾಡಲಾಗುತ್ತಿದೆ. ಮುಸಾವೀರ್‌ ಹುಸೇನ್‌ ಶಾಜಿಬ್‌ ಹಾಗೂ ಈತನಿಗೆ ನೆರವು ನೀಡಿದ ಅಬ್ದುಲ್‌ ಮಥೀನ್‌ ತಾಹಾ ತಲೆಮರೆಸಿಕೊಂಡಿದ್ದು, ಇವರಿಗಾಗಿ ಬಲೆ ಬೀಸಲಾಗಿದೆ. ಮಾರ್ಚ್‌ 1 ರಂದು ಬೆಂಗಳೂರಿನ ವೈಟ್‌ಫೀಲ್ಡ್‌ ನ ಬ್ರೂಕ್‌ ಫೀಲ್ಡ್‌ ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದರು. ಮತ್ತೊಂದೆಡೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಮೊಬೈಲ್ ಅಂಗಡಿಯೊಂದಕ್ಕೆ ಕೆಲ ದಿನಗಳ ಹಿಂದೆ ಭೇಟಿ ನೀಡಿದ್ದ ಎನ್‌ಐಎ ಅಧಿಕಾರಿಗಳು, ಹಿಂದು ಕಾರ್ಯಕರ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.


    Provided by
    Provided by

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.