nammatumakuru

    Subscribe to Updates

    Get the latest creative news from FooBar about art, design and business.

    What's Hot

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026
    Facebook Twitter Instagram
    ಟ್ರೆಂಡಿಂಗ್
    • 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
    • ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
    • ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
    • ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಂತರಿಕ ಸಾಮರ್ಥ್ಯ ಅರಿತರೆ ಸಾಧನೆ ಸಾಧ್ಯ: ಡಾ.ಸಿ.ಆರ್. ಚಂದ್ರಶೇಖರ
    ರಾಜ್ಯ ಸುದ್ದಿ January 19, 2024

    ಆಂತರಿಕ ಸಾಮರ್ಥ್ಯ ಅರಿತರೆ ಸಾಧನೆ ಸಾಧ್ಯ: ಡಾ.ಸಿ.ಆರ್. ಚಂದ್ರಶೇಖರ

    By adminJanuary 19, 2024No Comments2 Mins Read
    bagalakote

    ಬಾಗಲಕೋಟೆ: ಆರೋಗ್ಯವು ಅಮೂಲ್ಯ ಸಂಪತ್ತಾಗಿದ್ದು ಪೌಷ್ಟಿಕ ಆಹಾರ, ಮಿತ ವ್ಯಾಯಾಮದ ಮೂಲಕ ಕಾಪಾಡಿಕೊಳ್ಳಬೇಕು. ಹಣದಿಂದ ಅವಶ್ಯಕ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಆದರೆ ಆರೋಗ್ಯವನ್ನು ಪಡೆದುಕೊಳ್ಳುವುದು ಕಷ್ಟಕರ ಎಂದು ಮನೋವೈದ್ಯರಾದ ಡಾ.ಸಿ.ಆರ್. ಚಂದ್ರಶೇಖರ ಹೇಳಿದರು.

    ನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ‌ಗುರುವಾರ ಹಮ್ಮಿಕೊಂಡಿದ್ದ ದೇಹ ಮನಸ್ಸು ಮತ್ತು ಆರೋಗ್ಯದರಿವಿನ ಅಭಿಯಾನ ಕಾರ್ಯಕ್ರಮದಲ್ಲಿ ಮನೋವಿಜ್ಞಾನಕ್ಕೆ ಸಂಬಂಧಿಸಿ, 9 ಕಿರು ಪುಸ್ತಕಗಳನ್ನು ಬಿಡುಗಡೆಗೊಳಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು. ಪ್ರಸ್ತುತ ದಿನಮಾನಗಳಲ್ಲಿ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ. ಆರೋಗ್ಯವಂತ ವ್ಯಕ್ತಿ ಏನನ್ನಾದರೂ ಸಾಧಿಸಬಲ್ಲ. ಪ್ರತಿಯೊಬ್ಬರಲ್ಲಿಯೂ ಸಾಧರಣ ಬುದ್ಧಿ ಸಾಮರ್ಥ್ಯವಿದ್ದು ಅದನ್ನು ಉಪಯೋಗಿಸಿಕೊಳ್ಳಬೇಕು. ಆಲೋಚನೆ, ಕಲಿಕೆ, ಸಂವಹಣ, ಸೃಜನಶೀಲತೆ ಮತ್ತು ಕೌಶಲ್ಯ ಬೆಳವಣಿಗೆಯಿಂದ ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದರು.

    ಪ್ರತಿಯೊಬ್ಬರಿಗೂ ಐದು ಭಾಷೆಗಳನ್ನು ಕಲಿಯುವ ಸಾಮರ್ಥ್ಯವಿದೆ. ಒಂದೇ ಭಾಷೆಗೆ ಸೀಮಿತವಾಗದೆ, ಬಹು ಬಾಷೆಗಳನ್ನು ಕಲಿತು ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಿ. ದುಡುಕು ನಿರ್ಧಾರಗಳಿಗೆ ಬಲಿಯಾಗದೇ ಭಾವನೆಗಳನ್ನು ನಿಯಂತ್ರಿಕೊಳ್ಳುವ ಸಾಮರ್ಥ್ಯ ಬೆಳೆಸಿಕೊಳ್ಳಿ. ಕೋಪ, ಭಯ, ಉದ್ವಿಗ್ನತೆಯನ್ನು ಹತೋಟಿಗೆ ತೆಗೆದುಕೊಂಡರೆ ವೈಷಮ್ಯತೆ, ಆತ್ಮಹತ್ಯೆಯಂತಹ ಪ್ರಕರಣಗಳನ್ನು‌ ತಡೆಯಬಹುದು. ಮಾನಸಿಕ ಒತ್ತಡಗಳು ಹೆಚ್ಚುವುದರಿಂದ ಹೃದಯಾಘಾತ, ರಕ್ತದೊತ್ತಡದ, ಸಕ್ಕರೆ ಖಾಯಿಲೆಯಂತಹ ರೋಗಗಳಿಗೆ ಒಳಗಾಗುತ್ತೇವೆ. ಸಮಸ್ಯೆಗಳು ಎದುರಾದರೆ ಚಿಂತೆಗಳಿಗೆ ಬಲಿಯಾಗದೆ ಇತರರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ದುಷ್ಚಟಗಳಿಗೆ ಬಲಿಯಾಗಬೇಡಿ. ದೇಹವನ್ನು ಆರೋಗ್ಯವಾಗಿ, ಮನಸನ್ನು ಪ್ರಶಾಂತವಾಗಿರಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

    ಪ್ರಾಚಾರ್ಯರಾದ ಎಸ್.ಆರ್. ಮುಗನೂರಮಠ ಅವರು ಮಾತನಾಡಿ, ನಮ್ಮ ಆರೋಗ್ಯಕ್ಕೆ ನಾವೇ ಜವಾಬ್ದಾರರು. ಅದನ್ನು ಕಾಪಾಡಿಕೊಂಡು ಹೋಗುವ ಹೊಣೆ ನಮ್ಮದಾಗಿದೆ. ದಿನನಿತ್ಯ ಪತ್ರಿಕೆಗಳಲ್ಲಿ ಪುಸ್ತಕಗಳಲ್ಲಿ ಆರೋಗ್ಯ ಸಂರಕ್ಷಣೆಯ ಕುರಿತು ಹಲವಾರು ಅಂಕಣಗಳು ಪ್ರಕಟಗೊಳ್ಳುತ್ತಿದ್ದು, ಅವುಗಳನ್ನು ಅದ್ಯಯನ‌ಮಾಡಿ ಅರಿವು ಮೂಡಿಸಿಕೊಳ್ಳುವ ಕೆಲಸ ಮಾಡೋಣ ಎಂದರು.

    ಸಿ‌.ಆರ್.ಸಿ. ಸ್ನೇಹ ಬಳಗದ ಕಾರ್ಯದರ್ಶಿಗಳಾದ ಎಸ್.ಎಸ್. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾದ್ಯಾಪಕರಾದ ಡಾ.ಎಸ್.ಡಿ. ಕೆಂಗಲಗುತ್ತಿ ಪುಸ್ತಕಗಳ ಪರಿಚಯ ಮಾಡಿದರು. ಐಕ್ಯೂಎಸಿ ಸಂಯೋಜಕ ಡಾ.ಎ.ಯು. ರಾಠೋಡ, ಎನ್ ಎಸ್ ಎಸ್ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಎಮ್.ಎಚ್ ವಡ್ಡರ, ಡಾ. ವಿರುಪಾಕ್ಷ ಎನ್.ಬಿ, ಉಪನ್ಯಾಸಕರಾದ ಎ.ಎಸ್. ಕೋಲ್ಹಾರ್ ಸೇರಿದಂತೆ ಸಿ.ಆರ್. ಚಂದ್ರಶೇಖರ ಅಭಿಮಾನಿ ಬಳಗ ಮತ್ತು ವಿವಿಧ ವಿಭಾಗಗಳ ಉಪನ್ಯಾಸಕರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

     

     


    Provided by
    Provided by
    admin
    • Website

    Related Posts

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಹುಬ್ಬಳ್ಳಿ: 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆರಗುಗೊಳಿಸುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಈ…

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.