nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ  ಕ್ರಮ: ಈಶ್ವರ ಖಂಡ್ರೆ
    ಜಿಲ್ಲಾ ಸುದ್ದಿ December 15, 2024

    ಆನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ  ಕ್ರಮ: ಈಶ್ವರ ಖಂಡ್ರೆ

    By adminDecember 15, 2024No Comments1 Min Read
    Ishwara khandre

    ಬಾಳೆಹೊನ್ನೂರು (ಚಿಕ್ಕಮಗಳೂರು: ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು  ಪ್ರಯತ್ನ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಭರವಸೆ ನೀಡಿದರು.

    ಬಾಳೆ ಹೊನ್ನೂರಿನ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಫಲವಾಗಿ ಕರ್ನಾಟಕದಲ್ಲಿ 6395 ಆನೆಗಳಿದ್ದು. ಆನೆಗಳ ಸಂಖ್ಯೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದರೆ, ಹುಲಿಯ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ಅರಣ್ಯ ಪ್ರದೇಶ ಕಡಿಮೆ ಆಗುತ್ತಿರುವುದರಿಂದ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳವಾಗಿದ್ದು ಇದರ ನಿಯಂತ್ರಣಕ್ಕೆ ಸರ್ಕಾರ ಮತ್ತು ಅರಣ್ಯ ಇಲಾಖೆ ಹಗಲಿರುಳು ಶ್ರಮಿಸುತ್ತಿದೆ ಎಂದರು.


    Provided by
    Provided by

    ಆನೆಗಳು ನಾಡಿಗೆ ಬರುವುದನ್ನು ತಡೆಯಲು ರೈಲ್ವೆ ಬ್ಯಾರಿಕೇಡ್, ಕಂದಕ, ಸೌರ  ಬೇಲಿ ಹಾಕಲಾಗುತ್ತಿದೆ. ತುರ್ತು ಸ್ಪಂದನ ಪಡೆ, ಆನೆ ಕಾರ್ಯಪಡೆಯನ್ನು ರಚಿಸಿದ್ದು, ಜನರಿಗೆ ಆನೆಗಳ ಚಲನವಲನದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.  ಇದರ ಜೊತೆಗೆ 2 ಸಾವಿರ ಹೆಕ್ಟೇರ್ ಕಾನನ ಪ್ರದೇಶದಲ್ಲಿ ಆನೆಗಳ ವಿಹಾರಧಾಮ ನಿರ್ಮಿಸಲು ಕ್ರಮ ವಹಿಸಲಾಗಿದೆ ಎಂದರು.

    ಈ ಭೂಮಿಯಲ್ಲಿ ಮನುಷ್ಯನಿಗೆ ಬದುಕಲು ಹೇಗೆ ಹಕ್ಕಿದೆಯೋ ಅದೇ ರೀತಿ ಎಲ್ಲ ಜೀವಜಂತುಗಳಿಗೂ ಬದುಕುವ ಹಕ್ಕಿದೆ. ವನ್ಯ ಜೀವಿಗಳೊಂದಿಗೆ ಸಹಬಾಳ್ವೆ ಈ ಹೊತ್ತಿನ ಅಗತ್ಯವಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದರು.

    ಪಂಚಮಸಾಲಿ ಸಮುದಾಯಕ್ಕೆ ಮೀಸಲು ಹೋರಾಟದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಬಸವಣ್ಣನವರ ತತ್ವದಡಿ ನಡೆಯುತ್ತಿರುವುದು ನಮ್ಮ ಸರ್ಕಾರ. ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲು ಕೇಳುವ ಹಕ್ಕಿದೆ ಎಂದರು.

    ಸರ್ಕಾರ ಶಾಶ್ವತ ಹಿಂದುಳಿದವರ್ಗಗಳ ಆಯೋಗವನ್ನು ಸಾಂವಿಧಾನಿಕವಾಗಿ ರಚಿಸಿದ್ದು, ಅದು ಅಧ್ಯಯನ ಮಾಡಿ ವರದಿ ನೀಡುತ್ತದೆ. ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆಧಾರದಲ್ಲಿ ಈ ಬಗ್ಗೆ ಪರಾಮರ್ಶಿಸಿ, ಯಾವುದೆ ಜಾತಿಯ ಜನರಿಗೆ ಅನ್ಯಾಯವಾಗದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.