ಸಿರಾ: ಸಿರಾ ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿಯ ದೊಡ್ಡಾಲದಮರ ಗ್ರಾಮದ ಬುದ್ದಿಮಾಂದ್ಯ ಶಾರದಮ್ಮ ಮತ್ತು ಮಂಜುನಾಥ ಅವರ ಕುಟುಂಬದವರು, ಆಧಾರ್ ಕಾರ್ಡ್ ಸೇರಿದಂತೆ ಯಾವುದೇ ದಾಖಲೆಗಳಿಲ್ಲದೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆಂದು ಮನವಿ ಮಾಡಿಕೊಂಡಿದ್ದರು.
ಈ ಬಗ್ಗೆ ನಿನ್ನೆ , ಕಳ್ಳಂಬೆಳ್ಳ ನಾಡ ಕಚೇರಿಯ ಉಪ ತಹಶೀಲ್ದಾರ್ ನರಸಿಂಹಮೂರ್ತಿ ಅವರು ದೂರವಾಣಿ ಮೂಲಕ ಮಾತನಾಡಿ, ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
ಅಧಿಕಾರಿಗಳ ಭೇಟಿ:
ಇಂದು ಬೆಳಿಗ್ಗೆ 10:30 ಗಂಟೆಗೆ, ಉಪ ತಹಶಿಲ್ದಾರ್ ನರಸಿಂಹಮೂರ್ತಿ ಮತ್ತು ಗ್ರಾಮ ಆಡಳಿತಾಧಿಕಾರಿ ನಟರಾಜು ಅವರು ಶಾರದಮ್ಮ ಮತ್ತು ಮಂಜುನಾಥರ ಸ್ಥಳಕ್ಕೆ ಭೇಟಿ ನೀಡಿದರು. ಅವರು ಸಮಸ್ಯೆ ಆಲಿಸಿ, ತುರ್ತಾಗಿ ಸೌಲಭ್ಯ ಕಲ್ಪಿಸುವುದಾಗಿ ತಿಳಿಸಿದರು.
ಉಪ ತಹಶಿಲ್ದಾರ್ ನರಸಿಂಹಮೂರ್ತಿ ಮತ್ತು ಗ್ರಾಮ ಆಡಳಿತಾಧಿಕಾರಿ ನಟರಾಜು ಅವರ ತ್ವರಿತ ಹಾಗೂ ಸಮರ್ಪಕ ಕಾರ್ಯಚಟುವಟಿಕೆಗಳನ್ನು ಸ್ಥಳೀಯರು ಅಭಿನಂದಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296