ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ ಪ್ರತಿಭಟನೆಗೂ ಮುನ್ನವೇ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ ಸುರೇಶ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ 10 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗುಬ್ಬಿ ತಾಲೂಕಿನ ಚೇಳೂರಿನ ಫಾರ್ಮ್ ಹೌಸ ವೊಂದರಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನಾಕಾರರು ಪ್ರತಿಭಟನೆಗೆ ಕರೆ ನೀಡಿದ್ದರು.
ಇನ್ನೂ ಮೂರು ಬಸ್ ನಲ್ಲಿ ಆಗಮಿಸಿದ್ದ ಪ್ರತಿಭಟನಕಾರರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಟ್ಟೂರು ಸಮೀಪ ಆಂಜನೇಯಸ್ವಾಮಿ ಬಳಿ ಪ್ರತಿಭಟನಾಕಾರರು ಸೇರಿದ್ದರು. ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ, ಜ್ಯೋತಿಗಣೇಶ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW