ಹೈದರಾಬಾದ್: ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನಟ ಅಲ್ಲು ಅರ್ಜುನ್ ಶನಿವಾರ ಬಿಡುಗಡೆಯಾಗಿದ್ದಾರೆ.
ರಿಲೀಸ್ ಬಳಿಕ ಚಂಚಲಗೂಡ ಸೆಂಟ್ರಲ್ ಜೈಲಿನ ಹಿಂಬದಿ ಗೇಟ್ ನಿಂದ ಬಿಗಿಪೊಲೀಸ್ ಬಂದೋಬಸ್ತ್ ನಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಕರೆತರಲಾಗಿದೆ.
ಅಲ್ಲು ಅರ್ಜುನ್ ಗೆ ಕೆಳ ಹಂತದ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದರೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಕೋರ್ಟ್ ಪ್ರತಿ ಜೈಲು ಸೇರದ ಹಿನ್ನೆಲೆಯಲ್ಲಿ ಅವರ ಬಿಡುಗಡೆ ತಡವಾಗಿತ್ತು. ಹೀಗಾಗಿ ನಿನ್ನೆಯೇ ಬೇಲ್ ಸಿಕ್ಕರೂ ಕೂಡ ಅಲ್ಲು ಅರ್ಜುನ್ ಜೈಲಿನಲ್ಲಿ ಒಂದು ರಾತ್ರಿ ಕಳೆಯುವಂತಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx