ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣಗೆ ಸಂಕಷ್ಟ ಎದುರಾಗಿದ್ದು, ನೋಟಿಸ್ ನೀಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.
ನಟ ದರ್ಶನ್ ಶೆಡ್ ಗೆ ಹೋಗುವ ಮೊದಲು ( ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳ) ದರ್ಶನ್ ಚಿಕ್ಕಣ್ಣ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಕೊಲೆ ನಡೆಯುವದಕ್ಕೂ ಮುನ್ನ ಪಾರ್ಟಿ ಒಂದು ನಡೆದಿದ್ದು, ಈ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಭಾಗಿಯಾಗಿದ್ದರು ಎನ್ನಲಾಗಿದೆ. ಚಿಕ್ಕಣ್ಣಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲದೇ ಇದ್ರೂ ಕೊಲೆ ನಡೆದ ದಿನ ದರ್ಶನ್ ಜೊತೆ ಚಿಕ್ಕಣ್ಣ ಇದ್ದರು ಎಂಬ ಕಾರಣಕ್ಕೆ ನೋಟಿಸ್ ಕೊಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ. ಪೊಲೀಸ್ ವಿಚಾರಣೆಗೆ ಹಾಜರಾಗಿ ನಟ ಚಿಕ್ಕಣ್ಣ ಕೂಡ ಹೇಳಿಕೆ ನೀಡುವ ಸಾಧ್ಯತೆಯಿದೆ.
ನಟ ದರ್ಶನ್ ಶೆಡ್ ಗೆ ಹೋಗುವ ಮೊದಲು ಖಾಸಗಿ ರೆಸ್ಟೋರೆಂಟ್ ನಲ್ಲಿ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ, ನಿರ್ಮಾಪಕರು ಭಾಗಿಯಾಗಿದ್ದರು. ಪಾರ್ಟಿಯಿಂದ ಎದ್ದು ನಟ ದರ್ಶನ್ ಮನೆಗೆ ಹೊಗಬೇಕಿತ್ತು. ಆದರೆ ಅವರು ತೆರಳಿದ್ದು ಪಟ್ಟಣಗೆರೆ ಶೆಡ್ ಗೆ. ಪಾರ್ಟಿ ಮುಗಿಸಿ ಬಂದು ಹಲ್ಲೆಗೈದು ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಅನ್ನಪೂರ್ಣೇಶ್ವರಿನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು (ಜೂನ್ 17) ಸಂಜೆಯೇ ನೋಟಿಸ್ ನೀಡಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


