ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಜನರ ಜಾಮೀನು ಸುಪ್ರೀಂ ಕೋರ್ಟ್ ರದ್ದುಗೊಳಿಸಿರುವ ಬೆನ್ನಲ್ಲೇ ನಟಿ, ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಬಲವಾದ ಸಂದೇಶವನ್ನು ರವಾನಿಸುತ್ತದೆ ಎಂದು ರಮ್ಯಾ ಹೇಳಿದ್ದಾರೆ.
ನ್ಯಾಯಯುತವಾಗಿ ಪ್ರಕ್ರಿಯೆಯನ್ನು ಅನುಸರಿಸಿ. ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಳ್ಳಿ. ಇದು ದೀರ್ಘ ಮತ್ತು ಕಠಿಣ. ಆದರೆ ಸುರಂಗದ ಕೊನೆಯಲ್ಲಿ ಬೆಳಕು ಇದೆ ಎಂಬ ನಂಬಿಕೆ ಇರಲಿ ಎಂದು ನಾನು ಇತರರಿಗೆ ಹೇಳುತ್ತೇನೆ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ಸಿಕ್ಕೇ ಸಿಗುತ್ತದೆ. ನಿಮ್ಮ ಪ್ರಜ್ಞೆಗೆ ನಿಷ್ಠರಾಗಿರಿ ಎಂದು ರಮ್ಯಾ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC