ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರು, ಮನೆ ಊಟಕ್ಕಾಗಿ ಕಾನೂನು ಸಮರ ಮುಂದುವರಿಸಿದ್ದಾರೆ.
ಇತ್ತೀಚೆಗೆ ದರ್ಶನ್ ಅವರು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನೆ ಊಟಕ್ಕಾಗಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅರ್ಜಿಯನ್ನು ವಜಾ ಗೊಳಿಸಿತ್ತು. ಇದೀಗ ಮ್ಯಾಜಿಸ್ಟ್ರೇಟ್ ಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ನಟ ದರ್ಶನ್ ಅವರಿಗೆ ಜೈಲಿನ ಊಟದಿಂದಾಗಿ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಅತಿಸಾರ ಭೇದಿಯಾಗುತ್ತಿದೆ ಎಂದು ದೂರಿದ್ದರು. ತನಗೆ ಮನೆಯ ಊಟಕ್ಕೆ ಅವಕಾಶ ನೀಡಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳನ್ನು ದರ್ಶನ್ ಕೋರ್ಟ್ ಮುಂದಿಟ್ಟಿದ್ದಾರೆ. ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರಿಗೆ ಮನೆ ಊಟ ಸಿಗುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


