ಬೆಂಗಳೂರು: ಹೊಸ ವರ್ಷದ ದಿನವೇ ನಟ ದರ್ಶನ್ ತಮ್ಮ ಡೆವಿಲ್ ಸಿನಿಮಾದ ಡಬ್ಬಿಂಗ್ ನಲ್ಲಿ ಪಾಲ್ಗೊಳ್ಳುವ ಮೂಲಕ ಸಿನಿಮಾರಂಗಕ್ಕೆ ಮರು ಎಂಟ್ರಿ ನೀಡಿದ್ದಾರೆ. ಕಳೆದ ವರ್ಷದಲ್ಲಿ ನಡೆದ ಅಹಿತಕರ ಘಟನೆಗಳಿಂದಾಗಿ ಸಿನಿಮಾ ಕೆಲಸಗಳಿಂದ ದೂರವಿದ್ದ ದರ್ಶನ್ ಇದೀಗ ಮರುಪ್ರವೇಶ ಪಡೆದುಕೊಂಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿರುವ ನಟ ದರ್ಶನ್ ಡೆವಿಲ್ ಡಬ್ಬಿಂಗ್ ಕಾರ್ಯ ಆರಂಭ ಮಾಡಿದ್ದಾರೆ. ಸಿನಿಮಾದ ಶೇ.50ರಷ್ಟು ಚಿತ್ರೀಕರಣ ಈಗಾಗಲೇ ಮುಗಿದಿದೆ. ಇದೀಗ ಹೊಸ ವರ್ಷದ ಆರಂಭದಲ್ಲೇ ಡಬ್ಬಿಂಗ್ ನಲ್ಲಿ ಭಾಗಿಯಾಗಿರುವ ದರ್ಶನ್, ಹೊಸ ವರ್ಷಕ್ಕೆ ವೃತ್ತಿ ಜೀವನದ ಮರು ಆರಂಭ ಬರೆದಿದ್ದಾರೆ.
ನಟ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಫೆ.22ರ ಬಳಿಕ ಡೆವಿಲ್ ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಮಿಲನಾ ಪ್ರಕಾಶ್ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಮಂಗಳೂರಿನ ಹುಡುಗಿ ರಚನಾ ರೈ ನಾಯಕಿಯಾಗಿ ನಟಿಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx