ಬೆಂಗಳೂರು: ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್ ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ.
ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್ ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ನ ಎರಡನೇ ಆರೋಪಿ ದರ್ಶನ್ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಜಾಮೀನು ನೀಡುವಾಗ ವಿದೇಶಕ್ಕೆ ತೆರಳುವಂತಿಲ್ಲ ಎಂಬ ಷರತ್ತನ್ನು ಕೋರ್ಟ್ ವಿಧಿಸಿತ್ತು. ಹೀಗೆ ತೆರಳಬೇಕು ಎಂದರೆ ಕೋರ್ಟ್ ಅನುಮತಿ ಕಡ್ಡಾಯ ಎಂಬ ಷರತ್ತನ್ನು ನ್ಯಾಯಾಲಯ ವಿಧಿಸಿತ್ತು.
ಈಗ ದರ್ಶನ್ ಅವರು ವಿದೇಶಕ್ಕೆ ತೆರಳಲು ಅನುಮತಿ ಕೋರಿ 57ನೇ ಸಿಸಿಹೆಚ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕೋರ್ಟ್ ಇದರಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW