ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಘಟನೆ ನಡೆದು 92 ದಿನಗಳ ಬಳಿಕ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ನಗರದ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಯಲಿದೆ ಎಂದು ಹೇಳಲಾಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಈ ಪ್ರಕರಣದಿಂದ ಕಳಂಕ ಮುಕ್ತರಾಗಿ ಹೊರ ಬರಲಿ ಅಂತ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದರು. ಆದರೆ ನಟ ದರ್ಶನ್ ಜಾಮೀನಿಗಾಗಿ ಅರ್ಜಿ ಸಲ್ಲಿಸದೇ ಸುಮ್ಮನಿದ್ದರು. ಇದೀಗ ಅವರು ಅಂತಿಮವಾಗಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ನಟ ದರ್ಶನ್ ಅವರಿಗೆ ಕೋರ್ಟ್ ಜಾಮೀನು ನೀಡಲಿ ಅಂತ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ಈವರೆಗೆ ಎಲ್ಲ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರೂ ಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು. ಪ್ರಕರಣದ ಎ1ಆರೋಪಿಯಾಗಿರುವ ಪವಿತ್ರಾ ಗೌಡ ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಕೂಡ ವಜಾಗೊಂಡಿತ್ತು.
ಪ್ರಕರಣ ನಡೆದು ಇಷ್ಟು ದಿನಗಳಾದರೂ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿರಲಿಲ್ಲ. ಇದೀಗ ದರ್ಶನ್ ಜಾಮೀನುಕೋರಿ ಅರ್ಜಿ ಸಲ್ಲಿಸಿದ್ದಾರೆ. ಮುಂದೇನಾಗುತ್ತೋ ಕಾದುನೋಡಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q