ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರ ಬಂದೂಕು ಪರವಾನಗಿಯನ್ನು ಪೊಲೀಸ್ ಇಲಾಖೆ ರದ್ದುಪಡಿಸಿದೆ. ದರ್ಶನ್ ಅವರು ಬಂದೂಕು ಪರವಾನಗಿ ರದ್ದುಗೊಳಿಸದಂತೆ ಮನವಿ ಮಾಡಿದ ಹೊರತಾಗಿಯೂ ಪರವಾನಗಿಯನ್ನು ರದ್ದುಪಡಿಸಲಾಗಿದೆ.
ತಮಗೆ ಭದ್ರತೆಯ ಅವಶ್ಯಕತೆ ಇದ್ದು, ಆ ಕಾರಣಕ್ಕೆ ತಮಗೆ ಬಂದೂಕಿನ ಅಗತ್ಯತೆ ಇದೆಯೆಂದು ನಟ ದರ್ಶನ್ ಪೊಲೀಸರಿಗೆ ಪತ್ರ ಬರೆದಿದ್ದರು. ಆದರೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮುಗಿಯುವವರೆಗೆ ಬಂದೂಕನ್ನು ಇರಿಸಿಕೊಳ್ಳುವಂತಿಲ್ಲ ಎಂದು ಹೇಳಿ ಲೈಸೆನ್ಸ್ ಅನ್ನು ತಾತ್ಕಾಲಿಕವಾಗಿ ಪೊಲೀಸ್ ಇಲಾಖೆ ರದ್ದು ಮಾಡಿದೆ.
ಲೈಸೆನ್ಸ್ ರದ್ದಾಗಿರುವ ಕಾರಣ, ದರ್ಶನ್ ಈ ಕೂಡಲೇ ತಮ್ಮ ಬಂದೂಕನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸರೆಂಡರ್ ಮಾಡಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx