ನಟ ದರ್ಶನ್ ಜಾಮೀನು ವಿಚಾರವಾಗಿ, ಸರ್ಕಾರಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಸಮಯ ಕೇಳಿದ್ದರಿಂದ ಅರ್ಜಿ ವಿಚಾರಣೆ ಸೆ.30ಕ್ಕೆ ಮುಂದೂಡಿಕೆಯಾಗಿದೆ. ಇದರಿಂದಾಗಿ ನಟ ದರ್ಶನ್ ಗೆ ಆತಂಕ ಎದುರಾಗಿದೆ.
ಸೋಮವಾರ ಜಾಮೀನು ಸಿಗಬಹುದು ಎನ್ನುವ ನಿರೀಕ್ಷೆಯಲ್ಲಿ ದರ್ಶನ್ ಇದ್ದಾರೆ. ಈ ನಡುವೆ ಐಟಿ ಅಧಿಕಾರಿಗಳು ಕೂಡ ದರ್ಶನ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇದು ಜಾಮೀನಿಗೆ ತೊಡಕಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ವ್ಯವಹಾರ ನಡೆದಿದೆ. ಈ ವಿಚಾರವನ್ನು ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ಬಳಿಕ ಹಣ ವಹಿವಾಟು ಮೇಲೆ ಸರ್ಕಾರಿ ವಕೀಲರು ಅಪಸ್ವರ ತೆಗೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನೊಂದೆಡೆ ಕೊಲೆ ನಡೆದ ಸ್ಥಳದಲ್ಲಿ ಪವಿತ್ರಾ ಇರಲಿಲ್ಲ ಎಂಬ ವಾದ ಅವರ ಪರ ವಕೀಲರು ಮುಂದಿಟ್ಟಿದ್ದಾರೆ. ಐಟಿ ವಿಚಾರಣೆ, ಪವಿತ್ರಾ ಗೌಡ ನಿಲುವು ನೋಡಿಕೊಂಡು ದರ್ಶನ್ ಕಾನೂನು ಹೋರಾಟ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q