ಮೈಸೂರು: ನನ್ನ ಮದುವೆಗೆ ದರ್ಶನ್ ಬಂದರೆ ನನಗೆ ತುಂಬಾ ಸಂತೋಷ, ಈಗಿನ ಪರಿಸ್ಥಿತಿಯಲ್ಲಿ ಅವರನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ ಎಂದು ನಟ ಡಾಲಿ ಧನಂಜಯ್ ಸ್ಪಷ್ಟಪಡಿಸಿದ್ದಾರೆ.
ಫೆ.15 ಮತ್ತು 16ರಂದು ಡಾಲಿ ಧನಂಜಯ್ ವಿವಾಹ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.
ಮದುವೆಗೆ ಕನ್ನಡ ಚಿತ್ರರಂಗದ ಎಲ್ಲರನ್ನೂ ಕರೆದಿದ್ದೇನೆ. ದರ್ಶನ್ ಅವರನ್ನು ಕರೆಯುವ ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಅವರು ಸಿಗುತ್ತಿಲ್ಲ, ಅವರು ಮದುವೆಗೆ ಬಂದರೆ ನನಗೆ ಸಂತೋಷ ಎಂದಿದ್ದಾರೆ.
ಮಂತ್ರ ಮಾಂಗಲ್ಯ, ವಚನ ಮಾಂಗಲ್ಯ ಅಥವಾ ರಿಜಿಸ್ಟರ್ ಮದುವೆ ಆಗುವ ಆಸೆಯಿತ್ತು. ಆದರೆ ನಮ್ಮ ಕುಟುಂಬದ ಸದಸ್ಯರು, ಚಿತ್ರರಂಗ, ಸ್ನೇಹಿತರು ಎಲ್ಲರಿಗೂ ಊಟ ಹಾಕಿಸಬೇಕು. ಹೀಗಾಗಿ ಒಂದೇ ವೇದಿಕೆಯಲ್ಲಿ ಎಲ್ಲರಿಗೂ ಊಟ ಹಾಕಿ ಆಶೀರ್ವಾದ ಪಡೆಯೋಣ ಎನ್ನುವ ಆಸೆಯಿಂದ ಇಲ್ಲಿ ಮದುವೆ ಆಗುತ್ತಿದ್ದೇವೆ ಎಂದು ಧನಂಜಯ್ ತಿಳಿಸಿದರು.
ಅಭಿಮಾನಿಗಳು ಹಾಗೂ ವಿಐಪಿಗಳಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ. ಎಲ್ಲರಿಗೂ ಒಂದೇ ರೀತಿಯ ಊಟದ ವ್ಯವಸ್ಥೆ ಇರುತ್ತದೆ ಎಂದು ಧನಂಜಯ್ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4