ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಹಿರಿಯ ನಟ ನಿರ್ಮಾಪಕ ದ್ವಾರಕೀಶ್ ಇಂದು ನಿಧನರಾಗಿದ್ದಾರೆ.
ಅವರಿಗೆ 81 ವರ್ಷ ವಯಸ್ಸಾಗಿತ್ತು. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದ ದ್ವಾರಕೀಶ್ ಅವರ ನಿಧನ ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದೆ.
ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರಿಗೆ ಹೃದಯಾಘಾತ ಆಗಿದೆ ಎಂದು ದ್ವಾರಕೀಶ್ ಪುತ್ರ ಯೋಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ದ್ವಾರಕೀಶ್ ಅವರ ನಿಧನದ ಸುದ್ದಿ ಕೇಳಿ ಕನ್ನಡ ಚಿತ್ರರಂಗದ ಗಣ್ಯರು ಅವರ ಮನೆಯತ್ತ ಧಾವಿಸಿದ್ದಾರೆ. ಹಿರಿಯ ನಟನ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296